Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:7 - ಕನ್ನಡ ಸತ್ಯವೇದವು C.L. Bible (BSI)

7 ಇವುಗಳ ಕಾಲು ನೆಟ್ಟಗಿದ್ದವು; ಪಾದಗಳು ಕರುವಿನ ಗೊರಸಿನಂತೆ ಇದ್ದವು; ಬೆಳಗಿದ ಕಂಚಿನಂತೆ ಮಿನುಮಿನುಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿದ ತಾಮ್ರದ ಹಾಗೆ ಹೊಳೆಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವುಗಳ ಕಾಲುಗಳು ನೆಟ್ಟಗಿದ್ದು ಬೆಳಗಿದ ತಾಮ್ರದ ಹಾಗೆ ನಿಗಿನಿಗಿಸುತ್ತಿದ್ದವು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವುಗಳ ಕಾಲುಗಳು ನೆಟ್ಟಗಿದ್ದವು. ಅವುಗಳ ಪಾದಗಳು ಕರುವಿನ ಗೊರಸಿನಂತಿದ್ದವು. ಅವು ಬೆಳಗಿದ ತಾಮ್ರದಂತೆ ಹೊಳೆಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವುಗಳ ಕಾಲುಗಳು ನೆಟ್ಟಗಿದ್ದು, ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು, ಕಂಚಿಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:7
7 ತಿಳಿವುಗಳ ಹೋಲಿಕೆ  

ಅವರ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆ ಥಳಥಳಿಸುತ್ತಾ ಇದ್ದವು. ಧ್ವನಿ, ಜಲಪಾತದಂತೆ ಭೋರ್ಗರೆಯುತ್ತಿತ್ತು.


ಅವನ ಶರೀರ ಸುವರ್ಣರತ್ನದ ಹಾಗೆ ಕಂಗೊಳಿಸಿತು. ಅವನ ಮುಖ ಮಿಂಚಿನಂತೆ ಹೊಳೆಯಿತು. ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ಫಳಫಳಿಸಿದವು. ಅವನ ಕೈಕಾಲುಗಳು ಬೆಳಗಿದ ಕಂಚಿನ ಹಾಗೆ ಥಳಥಳಿಸಿದವು. ಅವನ ಮಾತಿನ ಶಬ್ದ ಜನಸಂದಣಿಯ ಕೋಲಾಹಲದಂತಿತ್ತು.


ಆ ಜೀವಿಗಳ ಮಧ್ಯೆ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.


ಗಾಳಿಗಳೇ ನಿನಗೆ ದೂತರುಗಳು I ಅಗ್ನಿಜ್ಞಾಲೆಗಳೇ ಆಳುಗಳು II


ಇದರಿಂದ ಶುದ್ಧಾಶುದ್ಧಗಳನ್ನೂ, ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು


ಭೂಮಿಯ ಮೇಲಿರುವ ಚತುಷ್ಪಾದ ಪ್ರಾಣಿಗಳಲ್ಲಿ ಈ ಕೆಳಕಂಡವುಗಳ ಮಾಂಸವನ್ನು ನೀವು ತಿನ್ನಬಹುದು: ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.


ಅವರು ನನ್ನನ್ನು ಅಲ್ಲಿಗೆ ತರಲು, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೆ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು