Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:18 - ಕನ್ನಡ ಸತ್ಯವೇದವು C.L. Bible (BSI)

18 ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಆಲಯದ ಹೊಸ್ತಿಲಿನ ಮೇಲಿನಿಂದ ಯೆಹೋವನ ಮಹಿಮೆಯು ಎದ್ದು ಕೆರೂಬಿದೂತರು ನಿಂತಿದ್ದ ಸ್ಥಳದ ಮೇಲೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೋವ ದೇವರ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:18
18 ತಿಳಿವುಗಳ ಹೋಲಿಕೆ  

ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ I ಇಳಿದು ಬಂದನು ವಾಯುರೆಕ್ಕೆಗಳ ವೇಗದಲಿ II


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


ಜೆರುಸಲೇಮ್, ಎಚ್ಚರಿಕೆಯಿಂದ ನಡೆದುಕೊ. ಇಲ್ಲವಾದರೆ ನಾನು ನಿನ್ನನ್ನು ಅಗಲಿಬಿಡುವೆನು. ನಿನ್ನನ್ನು ಪಾಳುಬಿದ್ದ ನಿರ್ಜನ ಪ್ರದೇಶವಾಗಿಸುವೆನು.”


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.


ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.


ಆಕೆಯ ಪತಿ ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆದಾಗ ತನ್ನ ಉಪಪತ್ನಿ ಬಾಗಿಲ ಮುಂದೆ ಬಿದ್ದಿರುವುದನ್ನೂ ಆಕೆಯ ಕೈಗಳು ಹೊಸ್ತಲಿನ ಮೇಲಿರುವುದನ್ನೂ ಕಂಡನು.


ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಿಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲಾಗಿದ್ದ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು.


ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ಕತ್ತಲನು ಕವಿಸಿಕೊಂಡನು ಸುತ್ತಲು ಛತ್ರಾಂಬರದೊಳು I ಮರೆಯಾದನು ಜಲಮಯ ನೀಲಮೇಘಗಳ ಮಧ್ಯದೊಳು II


ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.


ರೆಕ್ಕೆ ತೆರೆದು ನೆರಳು ನೀಡುವ ಕೆರೂಬಿ ನೀನಾಗಿದ್ದೆ ದೇವರ ಪರಿಶುದ್ಧ ಮರೆಯಲ್ಲಿ ನಿನ್ನ ನಾ ನೆಲೆಗೊಳಿಸಿದ್ದೆ. ಕೆಂಡದ ಮಡುಮಧ್ಯೆ ನೀ ವಿಹಾರಮಾಡುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು