Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:2 - ಕನ್ನಡ ಸತ್ಯವೇದವು C.L. Bible (BSI)

2 ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರಷನಿಗೆ ದೇವರು, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಯ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ ತಂದು ಪಟ್ಟಣದ ಮೇಲೆ ಎರಚು,” ಎಂದು ಅಪ್ಪಣೆಕೊಟ್ಟರು. ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ - ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಕೆರೂಬಿಯ ಕೆಳಗೆ ಪ್ರವೇಶಿಸಿ ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿತಂದು ಪಟ್ಟಣದ ಮೇಲೆ ಎರಚು ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೆ ಹೋಗಿ ಅಲ್ಲಿ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:2
19 ತಿಳಿವುಗಳ ಹೋಲಿಕೆ  

ಅನಂತರ ಆ ದೇವದೂತನು ಧೂಪಾರತಿಯನ್ನು ಎತ್ತಿಕೊಂಡು, ಅದನ್ನು ಬಲಿಪೀಠದ ಮೇಲಿದ್ದ ಕೆಂಡಗಳಿಂದ ತುಂಬಿಸಿ, ಭೂಮಿಗೆ ಎಸೆದನು. ಆಗ ಮಿಂಚು, ಗುಡುಗು, ಗರ್ಜನೆಗಳು ಮತ್ತು ಭೂಕಂಪವು ಉಂಟಾದವು.


ಆ ಜೀವಿಗಳ ಮಧ್ಯೆ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.


ಕೆರೂಬಿಗಳು ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವರ ಸಂಗಡವೇ ಏರಿದವು.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಸುರಿಯಲಿ ಆ ಜನರ ಮೇಲೆ ಉರಿಉರಿವ ಬೆಂಕಿಕೆಂಡ I ಅವರೇಳದಂತೆ ಸೇರಲಿ ಪಾತಾಳದ ಅಗ್ನಿಕುಂಡ II


ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನು, “ನಿಮ್ಮ ಅಪ್ಪಣೆಯಂತೆಯೇ ಮಾಡಿದ್ದೇನೆ,” ಎಂದು ಅರಿಕೆಮಾಡಿದನು.


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ I ಇಳಿದು ಬಂದನು ವಾಯುರೆಕ್ಕೆಗಳ ವೇಗದಲಿ II


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು