ಯೆಹೆಜ್ಕೇಲನು 10:4 - ಕನ್ನಡ ಸತ್ಯವೇದವು C.L. Bible (BSI)4 ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಪ್ರಾಕಾರದಲ್ಲೆಲ್ಲಾ ವ್ಯಾಪಿಸಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು. ಅಧ್ಯಾಯವನ್ನು ನೋಡಿ |