Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಒಬ್ಬ ಕೆರೂಬಿಯು ಇತರ ಕೆರೂಬಿಯರ ನಡುವೆ ಕೈಚಾಚಿ, ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು, ನಾರಿನ ಬಟ್ಟೆತೊಟ್ಟವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಒಬ್ಬ ಕೆರೂಬಿಯು ಇತರ ಕೆರೂಬಿಗಳ ನಡುವೆ ಕೈ ಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದುಕೊಂಡವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಒಂದು ಕೆರೂಬಿಯು ಕೆರೂಬಿಗಳ ನಡುವೆ ಕೈಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆರೂಬಿದೂತರಲ್ಲೊಬ್ಬನು ಅವರ ಮಧ್ಯೆಯಿದ್ದ ಉರಿಯುವ ಕೆಂಡದಲ್ಲಿ ಸ್ವಲ್ಪವನ್ನು ಆ ಮನುಷ್ಯನ ಕೈಗೆ ಸುರಿದನು. ಆ ಮನುಷ್ಯನು ಅಲ್ಲಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಬೆಂಕಿಗೆ ಚಾಚಿ, ಸ್ವಲ್ಪ ತೆಗೆದುಕೊಂಡು ನಾರುಮಡಿಯನ್ನು ಧರಿಸಿಕೊಂಡಿದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:7
7 ತಿಳಿವುಗಳ ಹೋಲಿಕೆ  

ದೇವರು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೆಂಕಿಯನ್ನು ತೆಗೆದುಕೋ,” ಎಂದು ಅಪ್ಪಣೆಕೊಟ್ಟರು. ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.


ಆ ಜೀವಿಗಳ ಮಧ್ಯೆ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.


(ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು