Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:13 - ಕನ್ನಡ ಸತ್ಯವೇದವು C.L. Bible (BSI)

13 ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ. “ಅಯ್ಯೋ, ಸರ್ವೇಶ್ವರನಾದ ದೇವರೇ, ಇಸ್ರಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲನಮಾಡುವಿರೋ?” ಎಂದು ಮೊರೆಯಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡು - ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ ಎಂದು ಮೊರೆಯಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ದೇವರ ಪರವಾಗಿ ಮಾತನಾಡುವದನ್ನು ನಿಲ್ಲಿಸಿದ ಕೂಡಲೇ, ಬೆನಾಯನ ಮಗನಾದ ಪೆಲತ್ಯನು ಸತ್ತನು. ನಾನು ನೆಲದ ಮೇಲೆ ಬಗ್ಗಿ, “ನನ್ನ ಒಡೆಯನಾದ ಯೆಹೋವನೇ, ನೀನು ಇಸ್ರೇಲಿನಲ್ಲಿ ಅಳಿದುಳಿದವರನ್ನು ಸಂಪೂರ್ಣವಾಗಿ ನಾಶಮಾಡುವಿಯೋ?” ಎಂದು ಗಟ್ಟಿಯಾಗಿ ಕೂಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:13
22 ತಿಳಿವುಗಳ ಹೋಲಿಕೆ  

ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸರ್ವೇಶ್ವರನಾದ ದೇವರೇ, ನೀವು ಜೆರುಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿಸಿ ಇಸ್ರಯೇಲಿನ ಶೇಷವನ್ನೆಲ್ಲಾ ನಾಶಮಾಡುವಿರೋ?” ಎಂದು ಮೊರೆಯಿಟ್ಟೆ.


ಈ ಮಾತುಗಳನ್ನು ಕೇಳಿದಾಕ್ಷಣವೇ ಅನನೀಯನು ಸತ್ತುಬಿದ್ದನು.


ನೀನು ಬೆಳಕನ್ನು ಕಾಣದೆ ಕೆಲವು ಕಾಲ ಕುರುಡನಾಗಿರುವೆ,” ಎಂದನು. ಆ ಕ್ಷಣವೇ ಎಲಿಮನ ಕಣ್ಣು ಮಬ್ಬಾಯಿತು; ಕತ್ತಲೆ ಕವಿದಂತಾಯಿತು; ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸಲಾರಂಭಿಸಿದನು.


ಆಕ್ಷಣವೇ ಆಕೆಯೂ ಸತ್ತು ಅವನ ಕಾಲಬಳಿ ಬಿದ್ದಳು. ಒಳಗೆ ಬಂದ ಯುವಕರು ಆಕೆಯೂ ಸತ್ತುಬಿದ್ದಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಪತಿಯ ಪಕ್ಕದಲ್ಲೇ ಸಮಾಧಿಮಾಡಿದರು.


ಆಗ ನಾನು ಆ ಸ್ವಾಮಿಗೆ: “ಆಲಿಸಿ, ಈ ಪಿಡುಗನ್ನು ತಪ್ಪಿಸಿ, ಅತಿ ಚಿಕ್ಕದಾದ ಯಕೋಬ ಜನಾಂಗ ಮುಂದೆ ಹೇಗೆ ಉಳಿದೀತು” ಎಂದು ಮೊರೆಯಿಟ್ಟೆ.


ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”


ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.


ನನಗೆ ಅಪ್ಪಣೆಯಾದಂತೆ ನಾನು ಈ ದೈವೋಕ್ತಿಯನ್ನು ನುಡಿದೆ. ನಾನು ಮಾತಾಡುತ್ತಿರುವಾಗ ಒಂದು ಶಬ್ದ ಕೇಳಿಸಿತು. ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ, ಜೋಡನೆಯಾದವು.


ಆದ್ದರಿಂದ ತಟ್ಟನೆ ಒದಗುವುದು ವಿಪತ್ತು ಮತ್ತೆ ಏಳಲಾಗದಂತಹ ಕಠಿಣ ಆಪತ್ತು.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


ಬೇತೇಲಿನ ಪೀಠದ ಬಳಿ ನಿಂತಿದ್ದ ಅರಸನು ಆ ದೈವಭಕ್ತನು ಪೀಠಕ್ಕೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು. ಅವನು ಅದನ್ನು ಹಿಂತೆಗೆದುಕೊಳ್ಳಲಾಗಲಿಲ್ಲ.


ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಸರ್ವೇಶ್ವರನಿಂದ ವಿಮುಖಗೊಳಿಸಿ ಇತರ ದೇವರುಗಳನ್ನು ಪೂಜಿಸುವಂತೆ ಮಾಡಬಹುದು. ಆಗ ಸರ್ವೇಶ್ವರ ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವರು.


“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’


ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ ಇದು:


“ಆದರೂ ನಾನು ಅವರನ್ನು ನಾಶಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಮರುಭೂಮಿಯಲ್ಲಿ ನಿರ್ಮೂಲಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು