Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:15 - ಕನ್ನಡ ಸತ್ಯವೇದವು C.L. Bible (BSI)

15 “ನರಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣತಮ್ಮಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಯೇಲ್ ವಂಶದ ಎಲ್ಲರಿಗೆ, ಜೆರುಸಲೇಮಿನಲ್ಲೇ ಉಳಿದಿರುವವರು, ‘ಸರ್ವೇಶ್ವರನ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇವಿುನವರು ಇಸ್ರಾಯೇಲ್ ವಂಶದವರಲ್ಲಿ ಯಾರಯಾರನ್ನು - ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವಾಸ್ತ್ಯವಾಗಿ ಸಿಕ್ಕಿದೆ ಎಂದು ಹೀನೈಸಿದರೋ ಅವರೆಲ್ಲರೂ ಉಳಿದಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನರಪುತ್ರನೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರು ನಿನ್ನ ಸಹೋದರರ, ನಿನ್ನ ಸ್ವಂತ ಸಂಬಂಧಿಕರ ಮತ್ತು ಇಡೀ ಇಸ್ರೇಲ್ ವಂಶದವರ ಬಗ್ಗೆ ಈಗ ಮಾತಾಡುತ್ತಿದ್ದಾರೆ. ‘ಅವರು, ಯೆಹೋವನಿಂದ ದೂರವಾಗಿದ್ದಾರೆ. ಈ ದೇಶವು ನಮಗೆ ನಮ್ಮ ಸ್ವಂತ ಆಸ್ತಿಯಾಗಿ ಕೊಡಲ್ಪಟ್ಟಿದೆ’ ಎಂದು ಅವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಾಯೇಲ್ ವಂಶದ ಎಲ್ಲರಿಗೆ, ಯೆರೂಸಲೇಮಿನಲ್ಲೇ ಉಳಿದಿರುವವರು, ‘ಯೆಹೋವ ದೇವರ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:15
6 ತಿಳಿವುಗಳ ಹೋಲಿಕೆ  

“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.


ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು