Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:18 - ಕನ್ನಡ ಸತ್ಯವೇದವು C.L. Bible (BSI)

18 ಅವರು ಅಲ್ಲಿಗೆ ಸೇರಿ ಎಲ್ಲ ಅಸಹ್ಯ ವಸ್ತುಗಳನ್ನೂ ಸಮಸ್ತ ಅನಿಷ್ಟ ವಿಗ್ರಹಗಳನ್ನೂ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯವಸ್ತುಗಳನ್ನೂ ಸಮಸ್ತ ಹೇಯವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಜನರು ಹಿಂದಕ್ಕೆ ಬಂದಾಗ ದೇಶದಲ್ಲಿರುವ ಎಲ್ಲಾ ಹೊಲಸು ವಿಗ್ರಹಗಳನ್ನು ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಅವರು ಅಲ್ಲಿಗೆ ಹಿಂತಿರುಗಿ ಮತ್ತು ಅದರಲ್ಲಿರುವ ಎಲ್ಲಾ ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ತೆಗೆದುಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:18
14 ತಿಳಿವುಗಳ ಹೋಲಿಕೆ  

ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.


ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”


ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”


ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


ಹೀಗಾದರೆ ಇಸ್ರಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿ ಇರುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು