Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:19 - ಕನ್ನಡ ಸತ್ಯವೇದವು C.L. Bible (BSI)

19 ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರನ್ನು ಹಿಂದಕ್ಕೆ ಬರಮಾಡಿ ಒಗ್ಗಟ್ಟಿನಲ್ಲಿರುವಂತೆ ಮಾಡುವೆನು. ಅವರಲ್ಲಿ ಹೊಸ ಆತ್ಮವನ್ನು ಇರಿಸುವೆನು. ಅವರಲ್ಲಿರುವ ಕಲ್ಲಿನ ಹೃದಯವನ್ನು ತೆಗೆದು ಮೃದುವಾದ ಹೃದಯವನ್ನಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:19
26 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ನಿಮ್ಮ ಹೃನ್ಮನಗಳು ನವೀಕೃತವಾಗಲಿ.


ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು