Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:2 - ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ಆತನು ನನಗೆ - ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ ದೇವರು ನನ್ನೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, “ನರಪುತ್ರನೇ, ಈ ಪಟ್ಟಣದಲ್ಲಿ ದುಷ್ಟಯೋಜನೆಗಳನ್ನು ಮಾಡುವವರೂ ಕೆಡುಕಿನ ಸಲಹೆಗಳನ್ನು ನೀಡುವವರೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಮೇಲೆ ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ, ದುರಾಲೋಚನೆಗಳನ್ನು ಹೇಳಿಕೊಡುವವರು ಈ ಜನರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:2
12 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.


ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳಿಗೆರಗಿ, ಅಳುತ್ತಾ, ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಹೂಡಿದ್ದ ದುಷ್ಟ ಯೋಜನೆಯನ್ನು ರದ್ದುಪಡಿಸುವಂತೆ ವಿಜ್ಞಾಪಿಸಿದಳು.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ನಿನೆವೆಯೇ, ಸರ್ವೇಶ್ವರಸ್ವಾಮಿಗೆ ವಿರುದ್ಧವಾಗಿ ಕುಯುಕ್ತಿಯನ್ನು ಕಲ್ಪಿಸುವವನು ನಿನ್ನಿಂದಲೆ ಹೊರಟಿದ್ದಾನೆ.


ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು