Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:23 - ಕನ್ನಡ ಸತ್ಯವೇದವು C.L. Bible (BSI)

23 ಆಗ ಸರ್ವೇಶ್ವರನ ತೇಜಸ್ಸು ಪಟ್ಟಣದ ಮಧ್ಯದಿಂದ ಏರಿ, ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಮೂಡಲಲ್ಲಿರುವ ಗುಡ್ಡದ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನ ಮಹಿಮೆಯು ಆಕಾಶಕ್ಕೆ ಎತ್ತಲ್ಪಟ್ಟು ಜೆರುಸಲೇಮಿಗೆ ಪೂರ್ವದಲ್ಲಿರುವ ಬೆಟ್ಟದ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ, ಪಟ್ಟಣದ ಪೂರ್ವದಿಕ್ಕಿನಲ್ಲಿರುವ ಪರ್ವತದ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:23
11 ತಿಳಿವುಗಳ ಹೋಲಿಕೆ  

ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ಆಗ ಇಗೋ, ಇಸ್ರಯೇಲಿನ ದೇವರ ಮಹಿಮಾದ್ಭುತ ದರ್ಶನವು ಬಯಲುಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.


ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಆಗ ಸರ್ವೇಶ್ವರನ ತೇಜಸ್ಸು ಪೂರ್ವಬಾಗಿಲ ಮಾರ್ಗವಾಗಿ ದೇವಸ್ಥಾನವನ್ನು ಪ್ರವೇಶಿಸಿತು.


ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು.


ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ,


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.


ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು