Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:24 - ಕನ್ನಡ ಸತ್ಯವೇದವು C.L. Bible (BSI)

24 ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಮೇಲೆ ದೇವರಾತ್ಮವು ಪರವಶನಾದ ನನ್ನನ್ನು ಎತ್ತಿ ದಿವ್ಯದರ್ಶನದ ಮುಖಾಂತರ ಕಸ್ದೀಯ ದೇಶದಲ್ಲಿ ಸೆರೆಯಾದವರ ಬಳಿಗೆ ಒಯ್ದುಕೊಂಡು ಬಂತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಆತ್ಮವು ನನ್ನನ್ನು ಆಕಾಶಕ್ಕೆ ಎತ್ತಿ ಬಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆ ಒಯ್ಯಲ್ಪಟ್ಟಿದ್ದ ಜನರ ಮಧ್ಯೆ ನಾನು ಬಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನ್ನು ಕಂಡೆನು. ಬಳಿಕ, ನಾನು ಕಂಡ ಆ ದರ್ಶನವು ನನ್ನನ್ನು ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅನಂತರ ದೇವರಾತ್ಮರು, ದೇವರ ಆತ್ಮರಿಂದಾದ ದರ್ಶನದಲ್ಲಿ ನನ್ನನ್ನು ಬಾಬಿಲೋನಿಯರ ದೇಶಕ್ಕೆ ಸೆರೆಯವರ ಬಳಿಗೆ ಎತ್ತಿಕೊಂಡು ಹೋದರು. ಆಗ ನಾನು ನೋಡಿದ ದರ್ಶನವು ನನ್ನಿಂದ ಮೇಲೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:24
16 ತಿಳಿವುಗಳ ಹೋಲಿಕೆ  

ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.


ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.


ಹೀಗೆ ಮೂರು ಸಾರಿ ನಡೆದ ಮೇಲೆ ಆ ವಸ್ತುವನ್ನು ಸ್ವರ್ಗಕ್ಕೆ ಎತ್ತಿಕೊಳ್ಳಲಾಯಿತು.


ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.


ಬಾಬಿಲೋನಿನ ನದಿಗಳ ತೀರದಲಿ ಕುಳಿತು I ಅತ್ತು ಪ್ರಲಾಪಿಸಿದೆವು ಸಿಯೋನನ್ನು ನೆನೆದು II


ಅನಂತರ ಅವರು ಅವನಿಗೆ, “ನಿಮ್ಮ ಸೇವಕರಾದ ನಮ್ಮಲ್ಲಿ ಐವತ್ತುಮಂದಿ ಬಲಿಷ್ಠ ಜನರಿದ್ದಾರೆ; ನಿಮ್ಮ ಯಜಮಾನರನ್ನು ಹುಡುಕಲು ಹೋಗುವುದಕ್ಕೆ ಅವರಿಗೆ ಅಪ್ಪಣೆಯಾಗಲಿ. ಸರ್ವೇಶ್ವರನ ಆತ್ಮ ಅವರನ್ನು ಎತ್ತಿಕೊಂಡುಹೋಗಿ ಒಂದು ಬೆಟ್ಟದ ಮೇಲಾಗಲಿ, ತಗ್ಗಿನಲ್ಲಾಗಲಿ ಇಟ್ಟಿರಬಹುದು,” ಎಂದು ಹೇಳಿದರು. ಅವನು, “ನೀವು ಕಳುಹಿಸಬೇಡಿ,” ಎಂದನು.


ಬಳಿಕ ಅವನ ಸಂಗಡ ಮಾತನಾಡಿದ ಆ ಸ್ಥಳದಿಂದ ಮೇಲಕ್ಕೇರಿ ಹೋದರು.


ಬರುವ ವರ್ಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು,” ಎಂದರು. ಇಷ್ಟನ್ನು ಮಾತಾಡಿ ಮುಗಿಸಿದ ಮೇಲೆ ದೇವರು ಅಬ್ರಹಾಮನಿಂದ ಅದೃಶ್ಯರಾದರು.


ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.


ಬಾಬಿಲೋನಿಯದ ರಾಜ್ಯ ಸೂರೆಯಾಗುವುದು. ಅದನ್ನು ಕೊಳ್ಳೆಹೊಡೆಯುವವರೆಲ್ಲರು ಸಂತೃಪ್ತಿಗೊಳ್ಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು.


ದೇವರಾತ್ಮ ನನ್ನನ್ನು ಎತ್ತಿ ಒಳಗಿನ ಪ್ರಾಕಾರಕ್ಕೆ ತಂದಿತು. ಆಗ ಏನಾಶ್ಚರ್ಯ! ಸರ್ವೇಶ್ವರನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು