Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರನ ಆತ್ಮ ನನ್ನಲ್ಲಿ ಆವೇಶ ಉಂಟುಮಾಡಿತು. ಹೀಗೆ ಸಾರಬೇಕೆಂದು ಅಪ್ಪಣೆ ಆಯಿತು: ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶಿಸಲು ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೋವನ ಆತ್ಮನು ನನ್ನ ಮೇಲೆ ಬಂದನು. ಆತನು ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನರಿಗೆ ತಿಳಿಸು: ಇಸ್ರೇಲ್ ಮನೆತನವೇ, ನೀನು ದೊಡ್ಡದೊಡ್ಡ ವಿಷಯಗಳನ್ನು ಆಲೋಚಿಸುತ್ತೀ. ನೀನು ಏನೂ ಯೋಚಿಸುತ್ತೀ ಎಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಆತ್ಮವು ನನ್ನ ಮೇಲೆ ಬಂದು ತಿಳಿಸಲು ಹೇಳಿದ್ದೇನೆಂದರೆ: “ಇಸ್ರಾಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಏಕೆಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:5
33 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಅವರು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮ ನನ್ನೊಳಗೆ ಸೇರಿ ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.


ದೇವರಾತ್ಮ ನನ್ನೊಳಗೆ ಹೊಕ್ಕು ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು. ಆಮೇಲೆ ಅವರು ನನಗೆ ಹೀಗೆ ಹೇಳಿದರು: ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.


ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆಹೋಗಿ ಅವರು ಕೇಳಲಿ ಅಥವಾ ಕೇಳದೆಹೋಗಲಿ ಅವರನ್ನು ಪ್ರಭೋಧಿಸು; ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ,’ ಎಂದು ಅವರಿಗೆ ಸಾರಿಹೇಳು.”


ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಅವನು ದೇವಗಿರಿಗೆ ಬಂದ ಕೂಡಲೆ ಪರವಶರಾದ ಪ್ರವಾದಿಗಳ ಗುಂಪೊಂದು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮ ಅವನ ಮೇಲೆ ಇಳಿದು ಬಂದುದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ಆಗ ಸರ್ವೇಶ್ವರನ ಆತ್ಮ ನಿನ್ನ ಮೇಲೆ ಬರುವುದು. ನೀನೂ ಮಾರ್ಪಟ್ಟು ಪ್ರವಾದಿಸುವೆ.


ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


ನಾನು ಉಪದೇಶಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದುಬಂದರು.


ಪೇತ್ರನು ಮಾತನಾಡುತ್ತಿದ್ದಂತೆ ಅವನ ಉಪದೇಶವನ್ನು ಕೇಳುತ್ತಿದ್ದ ಎಲ್ಲರ ಮೇಲೆ ಪವಿತ್ರಾತ್ಮ ಇಳಿದುಬಂದರು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?


ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.


‘ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರ, ಕಲ್ಲುಗಳ ವಿಗ್ರಹಗಳನ್ನು ಪೂಜಿಸುವೆವು’ ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆ ಎಷ್ಟು ಮಾತ್ರವೂ ನೆರವೇರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು