Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:7 - ಕನ್ನಡ ಸತ್ಯವೇದವು C.L. Bible (BSI)

7 “ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವು ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಆ ಹೆಣಗಳು ಮಾಂಸದಂತಿವೆ. ನಗರವು ಮಡಕೆಯಂತಿದೆ. ಆದರೆ ನಾನು ನಿಮ್ಮನ್ನು ಸುರಕ್ಷಿತವಾದ ಆ ಮಡಕೆಯಿಂದ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಕೊಂದು ಹಾಕಿದವರ ದೇಹಗಳೇ ಮಾಂಸ, ಈ ಪಟ್ಟಣವು ಬೇಯಿಸುವ ಪಾತ್ರೆ. ಆದರೆ ನಾನು ನಿಮ್ಮನ್ನು ಅದರಿಂದ ಹೊರಗೆ ತರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:7
10 ತಿಳಿವುಗಳ ಹೋಲಿಕೆ  

ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.


ಮತ್ತೆ ಸರ್ವೇಶ್ವರ ನನಗೆ, “ಇನ್ನೂ ಏನು ನೋಡುತ್ತಿರುವೆ?” ಎಂದರು. ಅದಕ್ಕೆ ನಾನು, “ಉರಿಯುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯೊಂದನ್ನು ನೋಡುತ್ತಿದ್ದೇನೆ. ಅದರ ಬಾಯಿ ಉತ್ತರದಿಂದ ಇತ್ತ ಬಾಗಿಕೊಂಡಿದೆ,” ಎಂದೆ.


ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.


ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.


ಈ ಪಟ್ಟಣ ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿ ಮಾಂಸವಾಗುವುದಿಲ್ಲ; ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು