Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:22 - ಕನ್ನಡ ಸತ್ಯವೇದವು C.L. Bible (BSI)

22 “ನರಪುತ್ರನೇ, ‘ಕ್ಲುಪ್ತಕಾಲ ದೂರ ದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ’ ಎಂಬುದಾಗಿ ಇಸ್ರಯೇಲ್ ನಾಡಿನವರು ಆಡಿಕೊಳ್ಳುವ ಈ ಗಾದೆ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನರಪುತ್ರನೇ, ಕ್ಲುಪ್ತಕಾಲವು ದೂರದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ನರಪುತ್ರನೇ, ‘ಸಂಕಷ್ಟದ ದಿನಗಳು ಉರುಳುತ್ತಿವೆ; ಎಲ್ಲಾ ದರ್ಶನಗಳು ನೆರವೇರುವುದಿಲ್ಲ’ ಎಂಬ ಈ ಗಾದೆಯನ್ನು ಇಸ್ರೇಲ್ ದೇಶದಲ್ಲಿರುವ ನೀವೆಲ್ಲರೂ ಹೇಗೆ ಅರ್ಥಮಾಡಿಕೊಳ್ಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಮನುಷ್ಯಪುತ್ರನೇ, ‘ದಿನಗಳು ಬಹಳವಾಗುತ್ತಿವೆ. ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂದು ಇಸ್ರಾಯೇಲ್ ದೇಶದಲ್ಲಿ ಹೇಳಿಕೊಳ್ಳುವ ಈ ಗಾದೆ ಏನು’?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:22
12 ತಿಳಿವುಗಳ ಹೋಲಿಕೆ  

ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.


“ನರಪುತ್ರನೇ, ಇಗೋ, ಇಸ್ರಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನ ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.


ಆ ದುರ್ದಿನದಿಂದ ತಪ್ಪಿಸಿಕೊಳ್ಳಲು ಯತ್ನಿಸುವ ಮುಖಂಡರೇ, ಮತ್ತಷ್ಟು ಶೀಘ್ರವಾಗಿ ಹಿಂಸಾಕ್ರಮಣವನ್ನು ಬರಮಾಡಿಕೊಳ್ಳುತ್ತೀರಿ.


“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ !


“ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ಬಗ್ಗೆ ಖಂಡಿತವಾಗಿ ನುಡಿಯುವರು.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ಆಮೇಲೆ ಸರ್ವೇಶ್ವರನ ವಾಣಿ ನನಗೆ ದಯಪಾಲಿಸಿದ್ದು:


ಆಗ ಸರ್ವೇಶ್ವರ ತಮ್ಮ ಜನರಿಗೆ ಇಂತೆಂದರು: “ಜನಾಂಗಗಳ ಮಧ್ಯೆ ನಡೆಯುವುದನ್ನು ನೋಡಿರಿ. ನೋಡಿದರೆ ಬೆಕ್ಕಸಬೆರಗಾಗುವಿರಿ. ನಿಮ್ಮ ಕಾಲದಲ್ಲೇ ನಾನೊಂದು ಕಾರ್ಯವನ್ನು ಮಾಡುವೆನು. ಅದನ್ನು ಕುರಿತು ನೀವು ಕಿವಿಯಾರೆ ಕೇಳಿದರೂ ನೀವು ನಂಬುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು