Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:24 - ಕನ್ನಡ ಸತ್ಯವೇದವು C.L. Bible (BSI)

24 “ಇನ್ನು ಮೇಲೆ ಇಸ್ರಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು; ಮೋಸದ ಕಣಿ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು, ಮೋಸದ ಕಣಿಯೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ವಿುಥ್ಯಾದರ್ಶನವಾಗದು, ಮೋಸದ ಕಣಿಯೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಇಸ್ರೇಲಿನಲ್ಲಿ ಇನ್ನು ಮೇಲೆ ಸುಳ್ಳುದರ್ಶನಗಳಿರುವುದಿಲ್ಲ; ಮುಖಸ್ತುತಿಯ ಕಣಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ‘ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ಸುಳ್ಳು ದರ್ಶನವೂ, ಮೋಸದ ಶಕುನವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:24
12 ತಿಳಿವುಗಳ ಹೋಲಿಕೆ  

ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಸುಳ್ಳುನಾಲಿಗೆ ಹಗೆಮಾಡುತ್ತದೆ ಸತ್ಯವನ್ನು; ಹೊಗಳುಭಟ್ಟನ ಬಾಯಿ ತರುತ್ತದೆ ನಷ್ಟವನ್ನು.


ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು