Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:3 - ಕನ್ನಡ ಸತ್ಯವೇದವು C.L. Bible (BSI)

3 “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನರಪುತ್ರನೇ, ವಲಸೆಹೋಗುವದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು, ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು; ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ಮನಸ್ಸಿಗೆ ತಂದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ನರಪುತ್ರನೇ, ನಿನ್ನ ಚೀಲಗಳನ್ನು ತುಂಬಿಸಿ ಸೆರೆಯಾಳಾಗಿ ಹೋಗುವವನಂತೆ ನಟಿಸು. ನೀನು ಹಗಲಲ್ಲಿ ಹೋಗುವುದನ್ನು ಜನರು ನೋಡಲಿ. ಸೆರೆಯಾಳಿನಂತೆ ಅವರ ಕಣ್ಣೆದುರಿನಲ್ಲೆ ನಿನ್ನ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗು. ಒಂದುವೇಳೆ ಅವರು ತಾವು ದಂಗೆಕೋರರೆಂದು ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:3
24 ತಿಳಿವುಗಳ ಹೋಲಿಕೆ  

ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು.


ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ.


ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.


“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


“ಇದು ಸರ್ವೇಶ್ವರನ ನುಡಿ - ನೊಗವನ್ನೂ ಕಣ್ಣಿಗಳನ್ನೂ ಮಾಡಿ ನಿನ್ನ ಹೆಗಲಿಗೆ ಹಾಕಿಕೊ.


“ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ I ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, II


ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


ಮುತ್ತಿಗೆಗೆ ತುತ್ತಾದ ಜನತೆಯೇ, ಗಂಟು ಕಟ್ಟಿಕೊಂಡು ನಾಡುಬಿಟ್ಟು ನಡೆ.


ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.


ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆ: ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಮನೆಯೊಳಗಿನಿಂದ ಆಚೆಗೆ ಹಾಕಿದೆ; ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ, ಕತ್ತಲಲ್ಲಿ ಆ ಸಾಮಗ್ರಿಗಳನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆ.


ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ದೇವಸ್ಥಾನದ ರೂಪ, ಅದರ ವ್ಯವಸ್ಥೆ, ಗಮನಾಗಮನ ನಿಯಮಗಳು, ಸಕಲ ರಚನಾ ವಿಧಾನಗಳು, ಸಮಸ್ತ ವಿಧಿಗಳು, ಸರ್ವನಿರ್ಮಾಣ ರೀತಿಗಳು, ಎಲ್ಲ ಕಟ್ಟಳೆಗಳು ಇವೆಲ್ಲವನ್ನು ಅವರಿಗೆ ತಿಳಿಸಿ, ಅವರು ಅದರ ಪೂರ್ಣಕ್ರಮವನ್ನೂ ಎಲ್ಲ ವಿಧಿಗಳನ್ನೂ ಅನುಸರಿಸಿ ಕೈಗೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು