Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:10 - ಕನ್ನಡ ಸತ್ಯವೇದವು C.L. Bible (BSI)

10 “ಅಶಾಂತಿಯಿರುವಾಗಲೂ ಅವರು ಶಾಂತಿಯಿದೆ ಎಂದು ಹೇಳಿ ನನ್ನ ಜನಗಳನ್ನು ವಂಚಿಸಿದ್ದಾರೆ. ಜನರು ದುರ್ಬಲ ಗೋಡೆಯನ್ನು ಕಟ್ಟಿದ್ದಾರೆ. ಅದಕ್ಕೆ ಆ ಪ್ರವಾದಿಗಳು ಸುಣ್ಣ ಬಳಿಯುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕ್ಷೇಮವಿಲ್ಲದಿದ್ದರೂ ಅವರು ಕ್ಷೇಮ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರಲ್ಲಾ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೆ, ಇಗೋ, ಅದಕ್ಕೆ ಸುಣ್ಣ ಬಳಿಯುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:10
27 ತಿಳಿವುಗಳ ಹೋಲಿಕೆ  

ಅಲ್ಲಿನ ಪ್ರವಾದಿಗಳು ಇವರಿಗಾಗಿ ಮಿಥ್ಯ ದರ್ಶನವನ್ನು ಕಂಡು, ಸುಳ್ಳು ಕಣಿಯನ್ನು ಹೇಳಿ, ಸರ್ವೇಶ್ವರ ಮಾತಾಡದಿದ್ದರೂ ‘ಸರ್ವೇಶ್ವರ ದೇವರು ಇಂತೆನ್ನುತ್ತಾರೆ’ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.


‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’


ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ಈ ಜನರಿಗೆ, ‘ಖಡ್ಗ ನಿಮ್ಮ ಕಣ್ಣಿಗೂ ಕಾಣಿಸದು, ಕ್ಷಾಮ ನಿಮಗೆಂದಿಗೂ ಬಂದೊದಗದು. ಸರ್ವೇಶ್ವರ ಈ ನಾಡಿನಲ್ಲೆ ನಿಮಗೆ ಚಿರಶಾಂತಿ ಸಮಾಧಾನವನ್ನು ಕೊಡುವರು’ ಎಂದು ಪ್ರವಾದಿಗಳೇ ನುಡಿಯುತ್ತಿದ್ದಾರೆ,” ಎಂದು ಹೇಳಿದೆನು.


ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ಆದರೆ ಇಸ್ರಯೇಲರು ಅವರ ಮಾತನ್ನು ಕೇಳದೆ, ಮನಸ್ಸೆಯಿಂದ ಪ್ರೇರಿತರಾಗಿ, ತಮ್ಮ ಮುಂದೆಯೇ ಸರ್ವೇಶ್ವರನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.


ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ಸಂಕಟ ಸಂಭವಿಸುವುದು; ಅಲ್ಪಸ್ವಲ್ಪ ಸಮಾಧಾನವನ್ನು ಹುಡುಕಿದರೂ ಸಿಕ್ಕದು.


“ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.


ಹಿತಸಮಾಚಾರವನ್ನು ಸಾರುವ ಪ್ರವಾದಿಯೇ ಸರ್ವೇಶ್ವರನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೆ ತಿಳಿಯತಕ್ಕದ್ದು,” ಎಂದು ಹೇಳಿದನು.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ಸುಖಶಾಂತಿಯನ್ನು ನಿರೀಕ್ಷಿಸಿದೆವು, ಯಾವ ಒಳಿತೂ ಸಿಗಲಿಲ್ಲ. ಸುಕ್ಷೇಮ ಕಾಲವನ್ನು ಎದುರುನೋಡಿದೆವು. ನಮಗೆ ಗಿಟ್ಟಿದ್ದು ಭಯಭ್ರಾಂತಿ ಮಾತ್ರ.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು.


ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ನೀತಿವಂತ ನೆರೆಯವನಿಗೆ ದಾರಿತೋರಿಸುವನು; ಅನೀತಿವಂತನು ಅವನಿಗೆ ದಾರಿ ತಪ್ಪಿಸುವನು.


ಇತ್ತ ಮೀಕಾಯೆಹುವನ್ನು ಕರೆಯಲು ಬಂದಿದ್ದ ದೂತನು, “ನೋಡಿ ಎಲ್ಲ ಪ್ರವಾದಿಗಳು ಏಕ ಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ. ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು