Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:13 - ಕನ್ನಡ ಸತ್ಯವೇದವು C.L. Bible (BSI)

13 “ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನ್ನು ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದ್ದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:13
20 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.


ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.


ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.


ಬಿರುಗಾಳಿಯೆದ್ದಿತು ಆತನಾಜ್ಞೆಯೊಂದಕ್ಕೆ I ತರಂಗಗಳು ಭೊರ್ಗರೆದವು ಅದರೊಂದಿಗೆ II


ಮಳೆಗೆ ಬದಲು ಕಳಿಸಿದ ಕಲ್ಮಳೆಯನು I ನಾಡಿನೆಲ್ಲೆಡೆಯೊಳು ಸಿಡಿಲುಮಿಂಚನು II


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ಹಿಮದ ಭಂಡಾರವನು ಹೊಕ್ಕಿರುವೆಯಾ? ಕಲ್ಮಳೆಯ ಬೊಕ್ಕಸವನು ನೋಡಿರುವೆಯಾ?


ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು.


ಇಗೋ, ಗೋಡೆ ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?’


ಇಕ್ಕಟ್ಟಿನ ಕಾಲಕ್ಕಾಗಿ ಅವುಗಳನು ನಾನು ಇಟ್ಟಿರುವೆನು ಯುದ್ಧಕದನಗಳ ದಿನಗಳಿಗಾಗಿ ನಾನು ಕಾದಿಟ್ಟಿರುವೆನು.


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ಶತ್ರು ಬಂದೆರಗಿದಾಗ ಸ್ವಾಮಿ ತನ್ನ ಶಕ್ತಿಯುತ ಕೈಯನ್ನು ಹಿಂದೆಗೆದುಬಿಟ್ಟ, ಇಸ್ರಯೇಲಿನ ಕೋಡನ್ನು ಕಡಿದು ಪುಡಿಪುಡಿ ಮಾಡಿಬಿಟ್ಟ, ಸುತ್ತುಗಟ್ಟಿ ನುಂಗುವ ಅಗ್ನಿಜ್ವಾಲೆಯಂತೆ ಯಕೋಬನನ್ನು ದಹಿಸಿಬಿಟ್ಟ.


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು