Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:14 - ಕನ್ನಡ ಸತ್ಯವೇದವು C.L. Bible (BSI)

14 ನೀನು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಹೊರಗೆಡಹುವೆನು; ಅದು ಹೀಗೆ ಬಿದ್ದುಹೋಗುವಾಗ ನೀವು ಅದರೊಳಗೆ ಸಿಕ್ಕಿ ನಾಶವಾಗುವಿರಿ; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಬೈಲುಪಡಿಸುವೆನು; ಅದು ಬಿದ್ದು ಹೋಗುವದು, ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಗೋಡೆಗೆ ಗಾರೆ ಹಾಕಿದಿರಿ. ಆದರೆ ನಾನು ಇಡೀ ಗೋಡೆಯನ್ನೆ ನಾಶಮಾಡುವೆನು. ಅದನ್ನು ನೆಲಸಮ ಮಾಡುವೆನು. ಆ ಗೋಡೆಯು ನಿಮ್ಮ ಮೇಲೆ ಬಿದ್ದು ನಿಮ್ಮನ್ನು ಕೊಲ್ಲುವುದು. ಆಗ ನಾನು ಯೆಹೋವನೆಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ, ನೆಲಸಮಮಾಡಿ, ಅದರ ಅಸ್ತಿವಾರವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವಾಗ, ನೀವು ಅದರಲ್ಲಿ ನಾಶವಾಗುವಿರಿ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:14
18 ತಿಳಿವುಗಳ ಹೋಲಿಕೆ  

ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.


ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.


ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”


ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


“ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು:


ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು