Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:17 - ಕನ್ನಡ ಸತ್ಯವೇದವು C.L. Bible (BSI)

17 “ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಭವಿಷ್ಯವಾಣಿ ಎಂದು ಹೇಳುವ ನಿನ್ನ ಸ್ವಕುಲ ಮಹಿಳೆಯರ ಕಡೆಗೆ ಮುಖಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಕಣಿಹೇಳುವ ನಿನ್ನ ಸ್ವಕುಲಸ್ತ್ರೀಯರ ಕಡೆಗೆ ಮುಖಮಾಡಿಕೊಂಡು ಅವರಿಗೆ ಖಂಡನೆಯಾಗಿ ಹೀಗೆ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ಹೀಗೆ ನುಡಿದನು: “ನರಪುತ್ರನೇ, ಇಸ್ರೇಲಿನ ಪ್ರವಾದಿನಿಯರನ್ನು ನೋಡು. ಆ ಪ್ರವಾದಿನಿಯರು ನನ್ನ ಪರವಾಗಿ ಮಾತಾಡುತ್ತಿಲ್ಲ. ಅವರು ತಮ್ಮ ಇಚ್ಛೆಯ ಪ್ರಕಾರ ಮಾತನಾಡುತ್ತಾರೆ. ಆದ್ದರಿಂದ ನೀನು ನನ್ನ ಪರವಾಗಿ ಅವರ ವಿರುದ್ಧವಾಗಿ ಮಾತನಾಡಬೇಕು. ಅವರಿಗೆ ಈ ಮಾತುಗಳನ್ನು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಈಗ ಮನುಷ್ಯಪುತ್ರನೇ, ನೀನು ತಮ್ಮ ಸ್ವಂತ ಕಲ್ಪನೆಯಿಂದ ಪ್ರವಾದಿಸುವ ನಿನ್ನ ಜನರ ಪುತ್ರಿಯರಿಗೆ ವಿರೋಧವಾಗಿ ನಿನ್ನ ಮುಖವನ್ನಿಟ್ಟು, ಅವರಿಗೆ ವಿರೋಧವಾಗಿ ಪ್ರವಾದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:17
13 ತಿಳಿವುಗಳ ಹೋಲಿಕೆ  

“ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ ದೆಬೋರಳೆಂಬ ಪ್ರವಾದಿನಿ ಇಸ್ರಯೇಲರಲ್ಲಿ ನ್ಯಾಯ ತೀರಿಸುತ್ತಿದ್ದಳು.


ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


“ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:


“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ, ಆ ಕಡೆಗೆ ಮಾತಾಡುತ್ತಾ ದಕ್ಷಿಣ ಸೀಮೆಯ ವನವನ್ನು ಉದ್ದೇಶಿಸಿ ಪ್ರಸ್ತಾಪವನ್ನೆತ್ತಿ,


ಆಮೇಲೆ ಕಬ್ಬಿಣದ ಹೆಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಯೇಲ್ ವಂಶದವರಿಗೆ ಒಂದು ಸಂಕೇತ.


ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.


ಅವನಿಗೆ ನಾಲ್ಕುಮಂದಿ ಅವಿವಾಹಿತ ಹೆಣ್ಣುಮಕ್ಕಳಿದ್ದರು. ಇವರೂ ದೇವರ ವಾಕ್ಯವನ್ನು ಪ್ರಚಾರಮಾಡುತ್ತಿದ್ದರು.


“ಓ ದೇವರೇ, ಟೋಬೀಯ-ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿಮ್ಮ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡಿ,” ಎಂದು ನಾನು ಪ್ರಾರ್ಥಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು