Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:20 - ಕನ್ನಡ ಸತ್ಯವೇದವು C.L. Bible (BSI)

20 ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಅಕಟಾ! ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಬೇಟೆಯಾಡುವ ಪ್ರಾಣಿಗಳನ್ನು ಬಿಡುಗಡೆಮಾಡಿ ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಗಳನ್ನು ನಾನು ಬಿಡಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದ್ದರಿಂದ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ನೀವು ಆ ಬಟ್ಟೆಯ ತೋಳುಪಟ್ಟಿಯನ್ನು ಜನರು ಬೋನಿನಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತೀರಿ. ಆದರೆ ನಾನು ಅವರನ್ನು ಸ್ವತಂತ್ರರಾಗುವಂತೆ ಮಾಡುವೆನು. ನಿಮ್ಮ ತೋಳಿನಿಂದ ಆ ಪಟ್ಟಿಯನ್ನು ಹರಿದುಹಾಕುವೆನು. ಆಗ ಜನರು ನಿಮ್ಮ ಬಂಧನದಿಂದ ವಿಮುಕ್ತರಾಗುವರು. ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯು ಬಿಡಿಸಿದ ಕೂಡಲೇ ಹಾರಾಡುವಂತೆ ಅವರೂ ಹಾರಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಬೇಟೆಯಾಡುವಂತೆ ಬೇಟೆಯಾಡಿದ ಪ್ರಾಣಗಳನ್ನು ಬಿಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:20
6 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ, ಉದ್ದವಾದವರಿಗೂ ಗಿಡ್ಡವಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಮಹಿಳೆಯರಿಗೆ ಧಿಕ್ಕಾರ! ಮಹಿಳೆಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮಗೆ ಬೇಕಾದವರ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?


ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು