Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:4 - ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ಗುಳ್ಳೆನರಿಗಳಂತಿದ್ದಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳ ಹಾಗೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “‘ಇಸ್ರೇಲರೇ, ನಿಮ್ಮ ಪ್ರವಾದಿಗಳು ಪಾಳುಬಿದ್ದ ಮನೆಗಳಲ್ಲಿ ಓಡಾಡುವ ನರಿಗಳಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:4
16 ತಿಳಿವುಗಳ ಹೋಲಿಕೆ  

ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ತೋಟಗಳನು ಹಾಳುಮಾಡುವಾ ನರಿಗಳನ್ನೂ ಮರಿಗಳನ್ನೂ ಹಿಡಿದು ತನ್ನಿ ಹೂಗಳು ಅರಳಿವೆ ನಮ್ಮ ತೋಟಗಳಲಿ. ನಲ್ಲೆ :


‘ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖಪ್ರವಾದಿಗಳಿಗೆ ಧಿಕ್ಕಾರ!


ಸರ್ವೇಶ್ವರನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ. ಇಸ್ರಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.


ಸಿಯೋನ್ ಶ್ರೀ ಪರ್ವತ ಹಾಳಾಯಿತು ಅದು ಅಲೆದಾಡುವ ನರಿಗಳ ಬೀಡಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು