Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:8 - ಕನ್ನಡ ಸತ್ಯವೇದವು C.L. Bible (BSI)

8 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ವ್ಯರ್ಥವಾದುದನ್ನು ನುಡಿದು ಸುಳ್ಳಾದುದನ್ನು ಕಂಡದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಸರ್ವೇಶ್ವರನಾದ ದೇವರೆಂಬ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ’ ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ವ್ಯರ್ಥವಾದದ್ದನ್ನು ನುಡಿದು ಸುಳ್ಳಾದದ್ದನ್ನು ಕಂಡದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಈಗ ನನ್ನ ಒಡೆಯನಾದ ಯೆಹೋವನು ನಿಜವಾಗಿಯೂ ಮಾತನಾಡುವನು. ಆತನು ಹೇಳುವುದೇನೆಂದರೆ, “ನೀವು ಸುಳ್ಳು ಹೇಳಿದ್ದೀರಿ, ನೀವು ಸುಳ್ಳುದರ್ಶನಗಳನ್ನು ನೋಡಿದ್ದೀರಿ. ಆದ್ದರಿಂದ ನಾನು ನಿಮಗೆ ವಿರುದ್ಧವಾಗಿದ್ದೇನೆ.” ಇದು ನನ್ನ ಒಡೆಯನಾದ ಯೆಹೋವನು ಹೇಳಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:8
21 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ - ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಿಬಿಡುವೆನು.


ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.


ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”


ಎದೋಮೇ ಇಗೋ, ನಿನಗೆ ನಾ ವಿರೋಧಿಯಾಗಿರುವೆ ನಿನ್ನ ನಾಡಿನ ಮೇಲೆ ಕೈಯೆತ್ತಿ ನಾಶಪಡಿಸುವೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.


ಆದುದರಿಂದ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಟೈರೇ, ಇಗೋ ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ವಿರುದ್ಧ ಎಬ್ಬಿಸುವೆನು.


ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.


“ನರಪುತ್ರನೇ, ನೀನು ಗೋಗನಿಗೆ ವಿರುದ್ಧ ಈ ದೈವೋಕ್ತಿಯನ್ನು ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಒಡೆಯನಾದ ಗೋಗನೇ,


ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ತನಕ, ಹೌದು, ಸುಡಾನ್ ಎಲ್ಲೆಯವರೆಗೂ ಪೂರ್ತಿಯಾಗಿ ಹಾಳುಪಾಳುಮಾಡುವೆನು.


“ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು.


ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.


ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.


ನನ್ನ ವಾಕ್ಯಗಳನ್ನು ಒಬ್ಬರಿಂದೊಬ್ಬರು ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧವಾಗಿ ಇದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


‘ಸೆರೆಯಲ್ಲಿ ಇರುವ ಎಲ್ಲರಿಗೆ ಹೀಗೆಂದು ಹೇಳಿಕಳಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಸರ್ವೇಶ್ವರ ಇಂತೆನ್ನುತ್ತಾರೆ: ನಾನು ಕಳಿಸದೆ ಇದ್ದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳನ್ನು ನಂಬುವಂತೆ ಮಾಡಿದ್ದಾನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು