ಯೆಹೆಜ್ಕೇಲನು 14:10 - ಕನ್ನಡ ಸತ್ಯವೇದವು C.L. Bible (BSI)10 ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆ ಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹೀಗೆ, ಸಲಹೆ ಕೇಳಲು ಬಂದ ಮನುಷ್ಯನೂ ಅವನಿಗೆ ಉತ್ತರಕೊಟ್ಟ ಪ್ರವಾದಿಯೂ ಒಂದೇ ಶಿಕ್ಷೆಯನ್ನು ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು. ಅಧ್ಯಾಯವನ್ನು ನೋಡಿ |
“ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರಲ್ಲಿ ಯಾರು ಯಾರು ವಿಗ್ರಹಗಳನ್ನು ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೋ, ಪಾಪಕಾರಿಯಾದ ಆ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೋ ಅಂಥವರು ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬಂದರೆ ಅವರು ಪಾತಕಕ್ಕೆ ಅಂದರೆ, ಅವರ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಸರ್ವೇಶ್ವರನಾದ ನಾನೇ ಅವರಿಗೆ ಉತ್ತರಕೊಡುವೆನು.