Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:11 - ಕನ್ನಡ ಸತ್ಯವೇದವು C.L. Bible (BSI)

11 ಹೀಗಾದರೆ ಇಸ್ರಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿ ಇರುವೆನು; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು, ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಇಸ್ರೇಲಿನ ಜನರು ಇನ್ನೆಂದಿಗೂ ನನ್ನ ನಾಯಕತ್ವವನ್ನು ತೊರೆದು ಅಲೆದಾಡುವದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನ್ನೆಂದಿಗೂ ತಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನ್ನ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:11
27 ತಿಳಿವುಗಳ ಹೋಲಿಕೆ  

ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.


“ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.


ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


“ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.


ಈ ಜನರನ್ನು ನಡೆಸುವವರು ತಪ್ಪುದಾರಿಗೆ ಎಳೆಯುವಂಥವರು. ಅವರನ್ನು ಹಿಂಬಾಲಿಸುವವರೆಲ್ಲ ನಾಶವಾಗುವರು.


ಕಷ್ಟಾನುಭವಕೆ ಮುಂಚೆ ದಾರಿತಪ್ಪಿ ನಡೆದೆ I ಆದರೀಗ ನಡೆಯುತ್ತಿರುವೆ ನಿನ್ನ ನುಡಿಯಂತೆ II


ಇದನ್ನು ಇಸ್ರಯೇಲರೆಲ್ಲರು ಕೇಳಿ, ಭಯಪಟ್ಟು, ಅಂಥ ದುಷ್ಕಾರ್ಯವನ್ನು ಮುಂದೆ ಮಾಡರು.


ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”


ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು, ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡೆಸರು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆ ಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು.


ಸರ್ವೇಶ್ವರ ದಯಪಾಲಿಸಿದ ವಾಣಿ ನನಗೆ ಹೀಗೆಂದಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು