Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:15 - ಕನ್ನಡ ಸತ್ಯವೇದವು C.L. Bible (BSI)

15 “ನನ್ನ ಅಪ್ಪಣೆಯ ಮೇರೆಗೆ ದುಷ್ಟಮೃಗಗಳು ಆ ನಾಡಿನಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳಿಸಿ, ಹಾಳುಮಾಡಿ, ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಪಡಿಸಿ ಹಾಳುಮಾಡಿ ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:15
9 ತಿಳಿವುಗಳ ಹೋಲಿಕೆ  

ನಾನು ಕಳುಹಿಸುವ ಕ್ಷಾಮದಿಂದ, ದುಷ್ಟಮೃಗಗಳಿಂದ ನಿನಗೆ ಪುತ್ರಶೋಕ ಪ್ರಾಪ್ತಿಯಾಗುವುದು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.


“ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು : ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.


ಅವರಿಗೆ ಆರಂಭದಲ್ಲಿ ಸರ್ವೇಶ್ವರನಲ್ಲಿ ಭಯಭಕ್ತಿ ಇರಲಿಲ್ಲ. ಆದ್ದರಿಂದ ಸರ್ವೇಶ್ವರ ಸಿಂಹಗಳನ್ನು ಕಳುಹಿಸಿದರು; ಅವು ಅವರಲ್ಲಿ ಅನೇಕರನ್ನು ಕೊಂದವು.


ಆಗ ಆ ಪ್ರವಾದಿ ಅವನಿಗೆ, “ನೀನು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ನನ್ನನ್ನು ಬಿಟ್ಟು ಹೊರಟಕೂಡಲೆ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು,” ಎಂದನು. ಅಂತೆಯೇ ಅವನು ಇವನನ್ನು ಬಿಟ್ಟುಹೋದ ಕೂಡಲೆ, ಒಂದು ಸಿಂಹವು ಬಂದು ಅವನನ್ನು ಕೊಂದುಹಾಕಿತು.


ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಬಂದೊದಗಿವೆ ಇಮ್ಮಡಿ ಬಾಧೆ ನಿನಗೆ ಪ್ರಲಾಪಿಸಿ ಗೋಳಿಡುವವರಾರು ನಿನ್ನೊಂದಿಗೆ? ನಾಡು ಹಾಳುಪಾಳಾಗಿದೆ, ತುತ್ತಾಗಿದೆ ಪ್ರಜೆ ಕ್ಷಾಮಕ್ಷೋಭೆಗೆ; ನಿನ್ನನು ಸಂತೈಸುವುದಾದರು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು