Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:22 - ಕನ್ನಡ ಸತ್ಯವೇದವು C.L. Bible (BSI)

22 ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಅವರು ನಿಮ್ಮ ಬಳಿ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು, ನಾನು ಜೆರುಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ ಅದಕ್ಕೆ ಉಂಟುಮಾಡಿದ ಎಲ್ಲ ಕೇಡುಗಳ ವಿಷಯವಾಗಿ, ಸಮಾಧಾನ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇವಿುನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿಯೂ ಸಮಾಧಾನ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನ್ನು ನಿಮ್ಮ ಬಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಬುದನ್ನು ಸ್ವತಃ ನೀವೇ ಅರ್ಥಮಾಡಿಕೊಳ್ಳುವಿರಿ. ನಾನು ಜೆರುಸಲೇಮಿನ ಮೇಲೆ ಬರಮಾಡಿದ ಇಡೀ ಆಪತ್ತಿನ ಬಗ್ಗೆ ನೀವು ಬಹಳವಾಗಿ ನೊಂದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:22
27 ತಿಳಿವುಗಳ ಹೋಲಿಕೆ  

ನಾನು ಕೆಲವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಉಳಿಸಿ, ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು: ನಾನೇ ಸರ್ವೇಶ್ವರ ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಹೀಗಿರಲು, ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವೆ, ನಾಚಿಕೆಪಡುವೆ.


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


‘ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ಇವುಗಳನ್ನೆಲ್ಲ ನಮಗೇಕೆ ಮಾಡಿದ್ದಾರೆ?’ ಎಂದು ಕೇಳುವಾಗ ನೀನು ಅವರಿಗೆ, ‘ನೀವು ಸರ್ವೇಶ್ವರನನ್ನೇ ತೊರೆದು, ಸ್ವಂತನಾಡಿನಲ್ಲೆ ಅನ್ಯದೇವತೆಗಳಿಗೆ ಸೇವೆಸಲ್ಲಿಸಿದ್ದೀರಿ. ಅಂತೆಯೇ ಹೊರನಾಡಿನಲ್ಲಿ ಅನ್ಯರಿಗೆ ಸೇವೆಮಾಡುವಿರಿ’ ಎಂದು ಹೇಳು.”


ಸರ್ವೇಶ್ವರ ಸ್ವಾಮಿ ಹೀಗೆಂದಿದ್ದಾರೆ : ನಾಡೆಲ್ಲ ಬಟ್ಟಬರಿದಾಗುವುದು; ಆದರೆ ನಾನು ಅದನ್ನು ಸಂಪೂರ್ಣವಾಗಿ ಲಯಮಾಡುವುದಿಲ್ಲ.


ಉಳಿಯುವುವು ಜನಾಂಗಗಳು ಜಗದ ಮಧ್ಯೆ, ಎಣ್ಣೆಯ ಬೀಜವನು ಉದುರಿಸಿದ ಮೇಲೆ ಮಿಗುವ ಹೀಚಿನಂತೆ, ದ್ರಾಕ್ಷಿ ಹಣ್ಣನು ಕೊಯ್ದ ಮೇಲೆ ಉಳಿದ ಕೂಳೆಯಂತೆ.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆ ಒಯ್ದನು. ಪರ್ಷಿಯದ ಪ್ರಭುತ್ವ ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಗುಲಾಮರಾಗಿದ್ದರು.


ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.


ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಮತ್ತು ಪೂರ್ವಕಾಲದಲ್ಲಿ ಅಧೋಲೋಕದ ಪಾಲಾದ ಏದೆನಿನ ಎಲ್ಲ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ಸಸ್ಯಗಳೂ ಅಲ್ಲಿ ಸಂತೈಸಿಕೊಂಡವು.


“ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನಹೊಂದುವನು; ಹೌದು, ಫರೋಹನೂ ಖಡ್ಗಹತರಾದ ಅವನ ಸಕಲ ಸೈನಿಕರೂ ಸಮಾಧಾನಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಓಹೋ, ಇವರು ಸರ್ವೇಶ್ವರನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದೆನಿಸಿಕೊಂಡರು. ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು