ಯೆಹೆಜ್ಕೇಲನು 14:4 - ಕನ್ನಡ ಸತ್ಯವೇದವು C.L. Bible (BSI)4 “ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರಲ್ಲಿ ಯಾರು ಯಾರು ವಿಗ್ರಹಗಳನ್ನು ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೋ, ಪಾಪಕಾರಿಯಾದ ಆ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೋ ಅಂಥವರು ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬಂದರೆ ಅವರು ಪಾತಕಕ್ಕೆ ಅಂದರೆ, ಅವರ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಸರ್ವೇಶ್ವರನಾದ ನಾನೇ ಅವರಿಗೆ ಉತ್ತರಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರಲ್ಲಿ ಯಾವ ಯಾವನು ತನ್ನ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯನ್ನು ಪ್ರಶ್ನೆಕೇಳುವದಕ್ಕೆ ಬರುವನೋ ಅವನ ಪಾತಕಕ್ಕೆ ಅಂದರೆ ಅವನ ಲೆಕ್ಕವಿಲ್ಲದ ಬೊಂಬೆಗಳಿಗೆ ತಕ್ಕ ಹಾಗೆ ಯೆಹೋವನಾದ ನಾನು ಅವನಿಗೆ ಉತ್ತರವನ್ನು ಕೊಡುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೇ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು. ಅಧ್ಯಾಯವನ್ನು ನೋಡಿ |