Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:2 - ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷದ ವಿಶಿಷ್ಟತೆಯೇನು? ಕಾಡುಗಿಡಗಳ ಕಟ್ಟಿಗೆಗಿಂತ ದ್ರಾಕ್ಷಿಯ ಕಟ್ಟಿಗೆಯಲಿ ಹೆಚ್ಚಾದುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ದ್ರಾಕ್ಷೆಯ ಗಿಡವು ವಿುಕ್ಕ ಗಿಡಗಳಿಗಿಂತ ಏನು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ದ್ರಾಕ್ಷಾಬಳ್ಳಿಯ ಕಟ್ಟಿಗೆಯಿಂದ ಏನು ಪ್ರಯೋಜನ? ಅದು ಕಾಡಿನಲ್ಲಿರುವ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ ಅದರ ಉಪಯುಕ್ತತೆಯಲ್ಲಿ ವ್ಯತ್ಯಾಸವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:2
20 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.


ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಬೆಳಗ್ಗೆ ಹೊರಟು ತೋಟಗಳಿಗೆ ಹೋಗೋಣ ಬಾ ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ ಅಲ್ಲೆ ನಿನಗೆ ನನ್ನ ಪ್ರೀತಿಯನರ್ಪಿಸುವೆ ಬಾ.


ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.


ತೋಟಗಳನು ಹಾಳುಮಾಡುವಾ ನರಿಗಳನ್ನೂ ಮರಿಗಳನ್ನೂ ಹಿಡಿದು ತನ್ನಿ ಹೂಗಳು ಅರಳಿವೆ ನಮ್ಮ ತೋಟಗಳಲಿ. ನಲ್ಲೆ :


ತುರಾಯಿಮರವೇ, ಗೋಳಾಡು ಬಿದ್ದುಹೋಗಿದೆ ದೇವದಾರು ನಾಶವಾಗಿವೆ ಭಾರೀ ಮರಗಳು. ರೋಧಿಸಲಿ ಬಾಷಾನಿನ ಅಲ್ಲೋನ್ ವೃಕ್ಷಗಳು ಉರುಳಿವೆ ನುಗ್ಗಲಾಗದಾ ದಟ್ಟವನಗಳು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಅಂಜೂರದ ಕಾಯಿಗಳು ಹಣ್ಣಾಗಿವೆ ದ್ರಾಕ್ಷಾಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ.’ ನಲ್ಲ : ಎದ್ದು ಬಾ, ನನ್ನ ಪ್ರೇಯಸಿಯೇ ಬಾ ನನ್ನೊಂದಿಗೆ, ಸುಂದರಿಯೇ.


ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:


ದ್ರಾಕ್ಷಿಯ ಕಟ್ಟಿಗೆಯನ್ನು ಬಳಸಿ ಮಾಡುತ್ತಾರೆಯೆ ಏನನ್ನಾದರು? ಸಾಮಗ್ರಿಗಳನ್ನು ತಗಲಿಹಾಕಲು ಅದರಿಂದ ಮಾಡುತ್ತಾರೆಯೇ ಗೂಟವನ್ನಾದರು?


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು