ಯೆಹೆಜ್ಕೇಲನು 15:4 - ಕನ್ನಡ ಸತ್ಯವೇದವು C.L. Bible (BSI)4 ಇಲ್ಲ, ಬೆಂಕಿಗೆ ಹಾಕುತ್ತಾರೆ. ಸೌದೆಯಾಗಿ, ಅದನ್ನು ಬೆಂಕಿ ಸುಟ್ಟುಬಿಡುತ್ತದೆ. ಅದರ ಎರಡು ಕೊನೆಗಳೂ ಇದ್ದಲಾಗುತ್ತವೆ. ಅದರ ಮಧ್ಯಭಾಗವು ಬಾರದು ಯಾವ ತರದ ಬಳಕೆಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಹಾ, ಅದನ್ನು ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವದು, ಮಧ್ಯಭಾಗವು ಇದ್ದಲಾಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದು ಕೇವಲ ಬೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಬೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟುಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ? ಅಧ್ಯಾಯವನ್ನು ನೋಡಿ |