ಯೆಹೆಜ್ಕೇಲನು 15:7 - ಕನ್ನಡ ಸತ್ಯವೇದವು C.L. Bible (BSI)7 ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರ ಮೇಲೆ ಕೋಪದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ ಬೆಂಕಿಯು ಅವರನ್ನು ನುಂಗಿಬಿಡುವದು; ನಾನು ಅವರ ಮೇಲೆ ಕೋಪದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |