Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:8 - ಕನ್ನಡ ಸತ್ಯವೇದವು C.L. Bible (BSI)

8 ಅವರು ದ್ರೋಹ ಮಾಡಿದ್ದರಿಂದ ನಾಡು ಕಾಡಾಗುವುದು ನನ್ನಿಂದ.” ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ದ್ರೋಹಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರು ನನ್ನನ್ನು ತೊರೆದು ಅನ್ಯ ದೇವರುಗಳನ್ನು ಆರಾಧಿಸಿದ್ದಕ್ಕಾಗಿ ನಾನು ಆ ದೇಶವನ್ನು ನಾಶಮಾಡುವೆನು” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:8
12 ತಿಳಿವುಗಳ ಹೋಲಿಕೆ  

ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಅವರು ನಡೆಸಿದ ಬಹುದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಪಾಳು ಮಾಡಿದಾಗ ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಅವಳನ್ನು ತನಗಾಗಿ ಗೊತ್ತುಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಅವನಿಂದ ಬಿಡಿಸಿಕೊಳ್ಳಲು ಅವಳಿಗೆ ಅವಕಾಶಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದುದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.


ಆಮೇಲೆ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ -


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು