Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:20 - ಕನ್ನಡ ಸತ್ಯವೇದವು C.L. Bible (BSI)

20 “ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞವಾಗಿ ಅರ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಅಹಾರವಾಗಲೆಂದು ಯಜ್ಞಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರು ಹೇಳಿದ್ದೇನೆಂದರೆ, “ನನ್ನ ಮಕ್ಕಳಾಗಿದ್ದ ನಿನ್ನ ಪುತ್ರಪುತ್ರಿಯರನ್ನು ನೀನು ತೆಗೆದುಕೊಂಡು ಅವರನ್ನು ಆಹಾರವನ್ನಾಗಿ ವಿಗ್ರಹಗಳಿಗೆ ಯಜ್ಞ ಅರ್ಪಿಸಿದೆ. ನಿನ್ನ ಸೂಳೆತನವು ಸಾಕಾಗಿರಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:20
23 ತಿಳಿವುಗಳ ಹೋಲಿಕೆ  

ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡುಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಆಹುತಿಕೊಟ್ಟಿದ್ದಾರೆ.


ನೀವು ಬಲಿಯರ್ಪಿಸುತ್ತಾ, ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಂಡಿರಿ. ಹೀಗಿರುವಾಗ ಇಸ್ರಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೇ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಸರ್ವೇಶ್ವರನಾದ ದೇವರ ನುಡಿ.


ಅವರು ತಮ್ಮ ಚೊಚ್ಚಲುಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು.


ತಮ್ಮ ಗಂಡುಹೆಣ್ಣು ಮಕ್ಕಳನ್ನೂ ಆಹುತಿಕೊಡುವುದಕ್ಕೆ ಬೆನ್‍ಹಿನ್ನೋಮ್ ಕಣಿವೆಯಲ್ಲಿನ ತೋಫೆತೆಂಬ ಬಲಿಪೀಠವನ್ನು ಕಟ್ಟಿದ್ದಾರೆ. ಇಂಥ ಕಾರ್ಯವನ್ನು ನಾನು ವಿಧಿಸಿಲ್ಲ. ಅದು ನನ್ನ ಮನಸ್ಸಿಗೂ ಸುಳಿದಿಲ್ಲ.


“ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನು ನನಗೆ ಮೀಸಲಾಗಿಡು; ಇಸ್ರಯೇಲರಲ್ಲಿ ಮನುಷ್ಯರಿಗಾಗಲಿ ಪಶುಪ್ರಾಣಿಗಳಿಗಾಗಲಿ ಹುಟ್ಟಿದ ಪ್ರಥಮ ಗರ್ಭಫಲ ನನ್ನದೇ,” ಎಂದು ಹೇಳಿದರು.


ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರಮಾಡಿದರು; ಹೌದು, ನನ್ನ ಮಂದಿರದ ನಟ್ಟನಡುವೆ ಇದನ್ನು ನಡೆಸಿದರು.


ನಿನ್ನ ಈ ಸೂಳೆತನ ಅಲ್ಪಕಾರ್ಯವೆಂದು ಭಾವಿಸಿದೆಯೋ? ಅದನ್ನು ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ ಮೂರ್ತಿಗಳಿಗೆ ಆಹುತಿಯಾಗಿಟ್ಟೆ!


ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.


ನಿಮಗೂ ನಿಮ್ಮ ಪಶುಪ್ರಾಣಿಗಳಿಗೂ ಹುಟ್ಟುವ ಚೊಚ್ಚಲು ಫಲವನ್ನೆಲ್ಲ, ಅವು ಗಂಡಾದ ಪಕ್ಷಕ್ಕೆ, ಸರ್ವೇಶ್ವರನ ಪಾಲೆಂದು ತಿಳಿದು ಅವರಿಗೆ ಸಮರ್ಪಿಸಬೇಕು.


ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ?


ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.


ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”


ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.


ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.


ನಾವು ಚಿಕ್ಕಂದಿನಿಂದ ನೋಡಿರುವಂತೆ ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಬಾಳ್ ದೇವತೆ ಕಬಳಿಸುತ್ತಾ ಬಂದಿದೆ.


ತಮ್ಮ ಮಕ್ಕಳನ್ನು ಬಾಳ್‍ದೇವತೆಗೆ ಆಹುತಿಕೊಡಲು ಆ ದೇವತೆಗೆ ಬಲಿಪೀಠಗಳನ್ನು ಕೂಡ ಏರ್ಪಡಿಸಿದ್ದಾರೆ. ನಾನು ಇಂಥ ಆಚಾರಗಳನ್ನು ವಿಧಿಸಲಿಲ್ಲ. ಅದರ ಮಾತನ್ನೇ ಎತ್ತಲಿಲ್ಲ. ಅಂಥದ್ದು ನನ್ನ ಮನಸ್ಸಿಗೂ ತೋಚಿದ್ದಿಲ್ಲ.


“ಆಹಾ, ಮಿತಿಮೀರಿದ ನಿನ್ನ ಕಾಮಾತುರ! ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಮಿಂಡರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲ ಅಸಹ್ಯವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು