Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:30 - ಕನ್ನಡ ಸತ್ಯವೇದವು C.L. Bible (BSI)

30 ಸರ್ವಶಕ್ತ ದೇವರು ಇಂತೆನ್ನುತ್ತಾರೆ: “ನಿನ್ನ ಮನಸ್ಸು ಮೋಹಪಾಶಕ್ಕೆ ಸಿಕ್ಕಿ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಿಣಿಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡಿಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿದ್ದೀಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಾಚಿಕೆಯಿಲ್ಲದ ಸೂಳೆಯಂತೆ ನೀನು ಮಾಡಿದ ಈ ಎಲ್ಲಾ ಕಾರ್ಯಗಳಿಂದ ನಾನು ನಿನ್ನ ವಿರುದ್ಧ ಕೋಪದಿಂದ ತುಂಬಿರುವೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ ‘ನೀನು ನಾಚಿಕೆಯಿಲ್ಲದ ವೇಶ್ಯೆಯಂತೆ ವರ್ತಿಸಿದಾಗ ನಾನು ಕೋಪದಿಂದ ತುಂಬಿದೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:30
14 ತಿಳಿವುಗಳ ಹೋಲಿಕೆ  

ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ಅಜ್ಞಾನವೆಂಬುವಳಾದರೊ ಕೂಗಾಟಗಾರ್ತಿ, ಏನೂ ತಿಳಿಯದ ಮೂಢ ಸ್ತ್ರೀ.


ಹೀಗೆ ಮೋಹಕ ಮಾತುಗಳಿಂದ ಒತ್ತಾಯಪಡಿಸುತ್ತಾಳೆ, ಅತಿಯಾದ ಒಲುಮೆಯಿಂದ ಪುಸಲಾಯಿಸುತ್ತಾಳೆ.


ಇದಲ್ಲದೆ ನೀನು ವ್ಯಾಪಾರಸ್ಥರಾದ ಬಾಬಿಲೋನಿಯದವರೊಡನೆ ಸೇರಿ ಅಲ್ಲಿಯೂ ಬಹಳ ಸೂಳೆತನಮಾಡಿದೆ; ಆಗಲೂ ನಿನಗೆ ತೃಪ್ತಿಯಾಗಲಿಲ್ಲ.”


ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ I ಬದ್ಧರಾಗಿರಲಿಲ್ಲ ಆತನ ನಿಬಂಧನೆಗಳಲಿ II


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?


ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು