ಯೆಹೆಜ್ಕೇಲನು 16:31 - ಕನ್ನಡ ಸತ್ಯವೇದವು C.L. Bible (BSI)31 ಒಂದೊಂದು ಬೀದಿಯ ಕೊನೆಯಲ್ಲೂ ನೀನು ಮಂಟಪವನ್ನು ಕಟ್ಟಿ ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಇದು ಕಡಿಮೆಯೆಂದು ತಿರಸ್ಕರಿಸುವ ಸೂಳೆಯಂತೆ ನೀನು ನಡೆಯುವವಳಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿದ್ದೀ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ಸೂಳೆಯಂತೆ ನೀನು ನಡೆಯುವವಳಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ದೇವರು ಹೇಳಿದ್ದೇನೆಂದರೆ, “ಆದರೆ ನೀನು ವೇಶ್ಯೆಯ ಹಾಗೆ ಪೂರ್ಣವಾಗಿರಲಿಲ್ಲ. ನೀನು ಎತ್ತರದ ಪೂಜಾಸ್ಥಳಗಳನ್ನು ಪ್ರತೀ ರಸ್ತೆಯ ಪ್ರಾರಂಭದಲ್ಲಿಯೂ ಯಜ್ಞವೇದಿಕೆಗಳನ್ನು ಪ್ರತೀ ರಸ್ತೆಯ ಮೂಲೆಗಳಲ್ಲಿಯೂ ಕಟ್ಟಿಸಿರುವೆ. ಆ ಎಲ್ಲಾ ಪುರುಷರೊಂದಿಗೆ ನೀನು ಸಂಭೋಗಿಸಿರುವೆ. ಆದರೆ ಸೂಳೆಯಂತೆ ಅವರಿಂದ ನೀನು ಹಣ ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ, ದಿಬ್ಬವನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು, ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿ ನೀನಲ್ಲ. ಅಧ್ಯಾಯವನ್ನು ನೋಡಿ |