Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:37 - ಕನ್ನಡ ಸತ್ಯವೇದವು C.L. Bible (BSI)

37 ಇವುಗಳನ್ನು ನಾನು ನೋಡಿ, ನೀನು ರಮಿಸಿದ ನಿನ್ನ ಎಲ್ಲ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತ ಜಾರರನ್ನೂ, ನೀನು ಹಗೆಮಾಡಿದ ಎಲ್ಲರನ್ನೂ, ಸುತ್ತುಮುತ್ತಲು ನಿನಗೆ ವಿರುದ್ಧ ಒಟ್ಟುಗೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇವುಗಳನ್ನು ನಾನು ನೋಡಿ ನೀನು ರವಿುಸಿದ ನಿನ್ನ ಎಲ್ಲಾ ವಿುಂಡರನ್ನೂ ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನಗೆ ವಿರುದ್ಧವಾಗಿ ಕೂಡಿಸಿ ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬೈಲುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಈ ಕಾರಣದಿಂದ, ನೀನು ಸುಖ ಕೊಟ್ಟಿರುವ ನಿನ್ನ ಎಲ್ಲಾ ಪ್ರಿಯರನ್ನು ಅಂದರೆ ಈಗಿನ ಪ್ರಿಯರನ್ನು ಮತ್ತು ನೀನು ತಿರಸ್ಕರಿಸಿರುವ ಹಿಂದಿನ ಪ್ರಿಯರನ್ನೂ ಒಟ್ಟಾಗಿ ಸೇರಿಸಿ, ನಿನ್ನ ಬೆತ್ತಲೆತನವನ್ನು ಅವರು ನೋಡುವಂತೆ ಮಾಡುವೆನು. ಅವರು ನಿನ್ನನ್ನು ಪೂರ್ತಿಯಾಗಿ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನೀನು ಆನಂದಪಟ್ಟ ನಿನ್ನ ಪ್ರಿಯರೆಲ್ಲರನ್ನು ಮತ್ತು ಹಗೆಮಾಡಿದವರೆಲ್ಲರನ್ನು ಸಹ ಕೂಡಿಸುವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ, ಅವರೆದುರಿಗೆ ನಿನ್ನನ್ನು ಬೆತ್ತಲೆ ಮಾಡಿ, ನಿನ್ನ ಮಾನವನ್ನು ಬಯಲು ಮಾಡುವೆ. ಆಗ ಅವರು ನಿನ್ನನ್ನು ಬೆತ್ತಲೆಯಾಗಿ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:37
16 ತಿಳಿವುಗಳ ಹೋಲಿಕೆ  

ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ಇವು ನನಗೇಕೆ ಸಂಭವಿಸಿದವು ಎಂದು ಮನದೊಳಗೇ ನೀನು ಅಂದುಕೊಳ್ಳುವೆ. ನೀನು ಮಾಡಿದುದು ಮಹಾಪಾಪ ! ಆದ್ದರಿಂದ ನಿನ್ನ ಉಡುಗೆಯನ್ನೇ ಕೀಳಲಾಗುವುದು. ನೀನು ಅತ್ಯಾಚಾರಕ್ಕೆ ಈಡಾಗುವೆ.


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


ಹಣ ತೆತ್ತು ಅನ್ಯರಾಷ್ಟ್ರಗಳೊಡನೆ ಮೈತ್ರಿಬೆಳೆಸಿಕೊಂಡಿದ್ದರೂ ನಾನು ಶೀಘ್ರದಲ್ಲಿ ಅದನ್ನು ಸೆರೆಗೂಡಿಸಲಿರುವೆನು. ಅಸ್ಸೀರಿಯದ ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿದೆ.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ನಿನ್ನ ಉಡುಗೆಯನ್ನು ನಿನ್ನ ಕಣ್ಮುಂದೆಯೇ ಕೀಳಿಸುವೆನು. ನೀನು ಅತ್ಯಾಚಾರಕ್ಕೆ ಈಡಾಗುವೆ.


“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.


“ಲೆಬನೋನ್ ಬೆಟ್ಟವನ್ನು ಹತ್ತಿ ಬೊಬ್ಬೆಯಿಡು ! ಬಾಷಾನಿನಲ್ಲಿ ಮೊರೆಯಿಡು ! ಅಬಾರೀಮಿನಲ್ಲಿ ಕಿರುಚಾಡು ! ಏಕೆಂದರೆ ನಿನ್ನ ಮಿಂಡರೆಲ್ಲ ಹಾಳಾಗಿಹೋದರು !


ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.


ಮುಯ್ಯಿ ತೀರಿಸುವೆನು ಯಾರನ್ನೂ ಕರುಣಿಸದೆ ಬೀದಿಪಾಲಾಗುವೆ ನೀನು ಲಜ್ಜೆಗೆಟ್ಟು, ಮಾನವಿಲ್ಲದೆ.”


ನೀನು ಗರ್ವಪಡುತ್ತಿದ್ದ ಆ ಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;


ಆ ಬಾಬಿಲೋನಿನವರು ಇವಳ ರತಿಮಂಚವನ್ನೇರಿ ತಮ್ಮ ಕಾಮತೃಷೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಎಷ್ಟು ಅಶುದ್ಧಳಾದಳೆಂದರೆ ಇವಳಿಗೇ ಅವರ ಬಗ್ಗೆ ಜಿಗುಪ್ಸೆ ಹುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು