Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:38 - ಕನ್ನಡ ಸತ್ಯವೇದವು C.L. Bible (BSI)

38 ವ್ಯಭಿಚಾರಮಾಡುವಂಥ, ರಕ್ತ ಹರಿಸುವಂಥ ಹೆಂಗಸರಿಗೆ ವಿಧಿಸತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ನನ್ನ ಕೋಪೋದ್ರೇಕವನ್ನೂ ರೋಷಾವೇಶವನ್ನೂ ರಕ್ತದಂತೆ ನಿನ್ನ ಮೇಲೆ ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ವ್ಯಭಿಚಾರಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಬಳಿಕ, ಕೊಲೆಗಾರ್ತಿಯರೂ ವ್ಯಭಿಚಾರಿಣಿಯರೂ ಶಿಕ್ಷಿಸಲ್ಪಡುವಂತೆ ನಾನು ನಿನ್ನನ್ನು ದಂಡಿಸುವೆನು. ನನ್ನ ಭಯಂಕರವಾದ ಕೋಪದಿಂದ ನಿನಗೆ ಮರಣದಂಡನೆಯನ್ನು ವಿಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:38
26 ತಿಳಿವುಗಳ ಹೋಲಿಕೆ  

“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”


ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು; ನಿನ್ನ ಮೂಗುಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.


“ಅವರು ನಿನ್ನ ವಿಷಯದಲ್ಲಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು; ಕತ್ತಿಗಳಿಂದ ತುಂಡರಿಸುವರು.


“ಆಹಾ, ಮಿತಿಮೀರಿದ ನಿನ್ನ ಕಾಮಾತುರ! ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಮಿಂಡರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲ ಅಸಹ್ಯವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,


ಮರಣಶಿಕ್ಷೆಗೆ ಪಾತ್ರನಾದ ಕೊಲೆಗಡುಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆ ಆಗಲೇಬೇಕು.


“ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣದಂಡನೆಯಾಗಬೇಕು.


ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.


ಅನಂತರ ಯೆಹೂದನು, ಬಹುಶಃ ಶೇಲಹನು ಕೂಡ ತನ್ನ ಅಣ್ಣಂದಿರಂತೆ ಸತ್ತಾನೆಂದು ಆಲೋಚಿಸಿ, ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರುಮನೆಯಲ್ಲಿರು,” ಎಂದು ನೆವಹೇಳಿದನು. ಅಂತೆಯೇ ಅವಳು ತೌರುಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.


ಅವರು ಆಯುಧ, ರಥ, ಸರಕುಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಗಳನ್ನು ಧರಿಸಿ, ನಿನಗೆ ವಿರುದ್ಧ ಸುತ್ತುಮುತ್ತಲು ವ್ಯೂಹ ಕಟ್ಟುವರು. ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಕೊಡುವೆನು; ಅವರು ತಮ್ಮ ನ್ಯಾಯಾನುಸಾರ ತೀರ್ಪುನೀಡಿ ನಿನ್ನನ್ನು ದಂಡಿಸುವರು.


ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ.


“ಆದರೆ ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅಂಥವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನಿಗೆ ಮರಣಶಿಕ್ಷೆಯಾಗಬೇಕು.


ಒಬ್ಬನನ್ನು ಕೊಲ್ಲುವಷ್ಟು ದೊಡ್ಡ ಕಲ್ಲಿನಿಂದ ಮತ್ತೊಬ್ಬನನ್ನೂ ಹೊಡೆದುಕೊಂದರೆ ಅವನೂ ನರಹತ್ಯಗಾರನೇ; ಅಂಥವನಿಗೂ ಮರಣಶಿಕ್ಷೆಯಾಗಬೇಕು.


ಒಬ್ಬನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧದಿಂದ ಮತ್ತೊಬ್ಬನನ್ನು ಹೊಡೆದುಕೊಂದರೆ ಅವನೂ ನರಹತ್ಯಗಾರನೇ. ಅಂಥವನಿಗೂ ಮರಣಶಿಕ್ಷೆಯಾಗಬೇಕು.


ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ಕೂಡ ನರಹತ್ಯಗಾರನೆ. ಅಂಥವನಿಗೂ ಮರಣಶಿಕ್ಷೆಯಾಗಬೇಕು. ಹತನಾದವನ ಸಮೀಪಬಂಧು ಅವನನ್ನು ಕಂಡೊಡನೆ ಕೊಲ್ಲಲಿ.


ಅವರು ನಾಡಿನ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಹೊಲೆಗೈದಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು