Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:40 - ಕನ್ನಡ ಸತ್ಯವೇದವು C.L. Bible (BSI)

40 “ಅವರು ನಿನ್ನ ವಿಷಯದಲ್ಲಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು; ಕತ್ತಿಗಳಿಂದ ತುಂಡರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಿನ್ನನ್ನು ಕಲ್ಲುಗಳಿಂದ ಕೊಲ್ಲುವದಕ್ಕಾಗಿ ಅವರು ಜನರನ್ನು ಒಂದುಗೂಡಿಸುವರು. ಬಳಿಕ ಅವರು ನಿನ್ನನ್ನು ಖಡ್ಗಗಳಿಂದ ತುಂಡುತುಂಡಾಗಿ ಕತ್ತರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಅವರು ನಿನಗೆ ವಿರುದ್ಧವಾಗಿ ಒಂದು ಗುಂಪನ್ನು ಕರೆದುಕೊಂಡು ಬಂದು, ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಖಡ್ಗಗಳಿಂದ ನಿನ್ನನ್ನು ತಿವಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:40
8 ತಿಳಿವುಗಳ ಹೋಲಿಕೆ  

ಸಭೆಯವರು ಇವರ ಮೇಲೆ ಕಲ್ಲುತೂರಿ, ಕತ್ತಿಗಳಿಂದ ಸಂಹರಿಸಿ, ಇವರ ಗಂಡುಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಇವರು ಅವಳನ್ನು ಅವಮಾನಪಡಿಸಿ, ಅವಳ ಗಂಡು ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ, ಅವಳನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯನಿರ್ಣಯವಾಗುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು; ನಿನ್ನ ಮೂಗುಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು