Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:44 - ಕನ್ನಡ ಸತ್ಯವೇದವು C.L. Bible (BSI)

44 “ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ಬಗ್ಗೆ ಖಂಡಿತವಾಗಿ ನುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ಆಹಾ, ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆಹಾ, ಗಾದೆಗಳಲ್ಲಿ ಜಾಣರು ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ಜ್ಞಾನೋಕ್ತಿಗಳನ್ನು ಉಲ್ಲೇಖಿಸಲು ಇಚ್ಛಿಸುವ ಪ್ರತಿಯೊಬ್ಬನು ನಿನ್ನ ವಿರುದ್ಧವಾಗಿ ಇದನ್ನು ಉಲ್ಲೇಖಿಸುವನು: ‘ತಾಯಿಯಂತೆ ಮಗಳು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ ‘ “ತಾಯಿಯಂತೆ ಮಗಳು,” ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಪ್ರತಿಯೊಬ್ಬರು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:44
12 ತಿಳಿವುಗಳ ಹೋಲಿಕೆ  

ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,


ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಗಂಡನನ್ನೂ ಮಕ್ಕಳನ್ನೂ ಅಸಹ್ಯವಾಗಿ ಕಂಡ ನಿನ್ನ ತಾಯಿಗೆ ನೀನು ತಕ್ಕ ಮಗಳು ; ಗಂಡನನ್ನೂ ಮಕ್ಕಳನ್ನೂ ಬೇಸರ ಪಡಿಸಿದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.


ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ಆದರೆ ಇಸ್ರಯೇಲರು ಅವರ ಮಾತನ್ನು ಕೇಳದೆ, ಮನಸ್ಸೆಯಿಂದ ಪ್ರೇರಿತರಾಗಿ, ತಮ್ಮ ಮುಂದೆಯೇ ಸರ್ವೇಶ್ವರನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ಅವರನ್ನು ರೇಗಿಸಿದರು;


ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.


“ನರಪುತ್ರನೇ, ‘ಕ್ಲುಪ್ತಕಾಲ ದೂರ ದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ’ ಎಂಬುದಾಗಿ ಇಸ್ರಯೇಲ್ ನಾಡಿನವರು ಆಡಿಕೊಳ್ಳುವ ಈ ಗಾದೆ ಏನು?


ಅವರಿಗೆ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈ ಗಾದೆಯನ್ನು ನಿಲ್ಲಿಸಿಬಿಡುವೆನು; ಅದು ಇಸ್ರಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಆ ಮಾತನ್ನು ಕೇಳಿರಿ: ಕ್ಲುಪ್ತಕಾಲ ಹತ್ತಿರಬಂದಿದೆ. ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು