Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:46 - ಕನ್ನಡ ಸತ್ಯವೇದವು C.L. Bible (BSI)

46 “ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನಿನ್ನೆಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನಿನ್ನ ಅಕ್ಕ ಸಮಾರ್ಯಳು. ಆಕೆಯು ನಿನ್ನ ಉತ್ತರ ದಿಕ್ಕಿನಲ್ಲಿ ತನ್ನ ಹೆಣ್ಣು ಮಕ್ಕಳೊಂದಿಗೆ (ಪಟ್ಟಣಗಳು) ವಾಸ ಮಾಡಿದ್ದಳು. ನಿನ್ನ ತಂಗಿಯು ಸೊದೋಮಳು. ಆಕೆ ನಿನ್ನ ದಕ್ಷಿಣದಲ್ಲಿ ತನ್ನ ಹೆಣ್ಣುಮಕ್ಕಳೊಂದಿಗೆ (ಪಟ್ಟಣಗಳು) ವಾಸಿಸಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ನಿನ್ನ ಉತ್ತರ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ. ದಕ್ಷಿಣ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:46
30 ತಿಳಿವುಗಳ ಹೋಲಿಕೆ  

ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.


ಇದಕ್ಕನುಸಾರ ನಾನು ಕುವರಿಯನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವರು. ಆಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವೆ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


“ಸಮಾರಿಯ ಎಂಬಾಕೆ ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ?


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಬಯಲು ಭೂಮಿಯಲ್ಲಿನ ಅವರ ಕುವರಿಯರು ಖಡ್ಗದಿಂದ ಹತರಾಗುವರು; ನಾನೇ ಸರ್ವೇಶ್ವರ ಎಂದು ಎಲ್ಲರಿಗೂ ಗೊತ್ತಾಗುವುದು.”


“ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ಹಾದರಕ್ಕಿಂತ ಹೆಚ್ಚಾಗಿ ಹಾದರವನ್ನು ನಡೆಸಿ ಅವಳನ್ನು ಮೀರುವಷ್ಟು ಕೆಟ್ಟವಳಾದಳು.


“ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ.


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ಅವರೋ ಸೊದೋಮ್ಯರೆಂಬ ದ್ರಾಕ್ಷಾಲತೆ ಅವರೋ ಗೊಮೋರ್ಯರೆಂಬ ತೋಟದಬೆಳೆ.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನೇನೋ ಹಾಳುಮಾಡಿದರು, ಆದರೆ ಅಬ್ರಹಾಮನನ್ನು ನೆನಪಿಗೆ ತಂದುಕೊಂಡು ಲೋಟನನ್ನು ತಪ್ಪಿಸಿ ಕಾಪಾಡಿದರು.


ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್, ಚೋಗರ್ ಎಂಬ ಬೇಲಗ್ ಈ ಪಟ್ಟಣಗಳ ರಾಜರು ಹೊರಟು ಅವರಿಗೆದುರಾಗಿ, ಅಂದರೆ


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.


“ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು.


ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದ ಪ್ರಕಾರ ಜೆರುಸಲೇಮನ್ನೂ ಅದರ ಮೂರ್ತಿಗಳನ್ನೂ ನಾಶಮಾಡುತ್ತೇನೆ” ಎಂದು ಅಸ್ಸೀರಿಯ ಕೊಚ್ಚಿಕೊಳ್ಳುತ್ತಿದೆ.


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು