Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:48 - ಕನ್ನಡ ಸತ್ಯವೇದವು C.L. Bible (BSI)

48 ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನೀನೂ ನಿನ್ನ ಕುವರಿಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ ಆಕೆಯ ಕುವರಿಯರಾಗಲಿ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ, ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ದೇವರಾದ ಯೆಹೋವನು ಹೀಗೆನ್ನುತ್ತಾನೆ, ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮಳು ಮತ್ತು ಆಕೆಯ ಹೆಣ್ಣುಮಕ್ಕಳು ನೀನು ನಡಿಸಿದಷ್ಟು ದುಷ್ಟತ್ವವನ್ನು ನಡಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು ಮತ್ತು ಅವಳ ಪುತ್ರಿಯರು; ನೀನು ನಿನ್ನ ಪುತ್ರಿಯರು ಮಾಡಿದೆ ಹಾಗೆ ಮಾಡಿಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:48
9 ತಿಳಿವುಗಳ ಹೋಲಿಕೆ  

ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ತೀರ್ಪಿನ ದಿನ ಈ ಊರಿನ ಗತಿ ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದೆಂದು ನಾನು ನಿಮಗೆ ಹೇಳುತ್ತೇನೆ.


ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.


“ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.


“ಆದರೆ ನೀನು ನಡೆದ ದುರ್ಮಾರ್ಗ ಅವರು ನಡೆದಂಥದಲ್ಲ. ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ. ಅವರ ದುರ್ನಡತೆ ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.


ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪರವಾಗಿ ನಿಂತದ್ದರಿಂದ ನೀನು ನಾಚಿಕೆಪಡಬೇಕು; ಅವರಿಗಿಂತ ಅಧಿಕವಾಗಿ ನೀನು ಅಸಹ್ಯ ಪಾಪಗಳನ್ನು ಮಾಡಿರುವುದರಿಂದ ಅವರು ನಿನಗಿಂತ ಉತ್ತಮರಾಗಿದ್ದಾರೆ. ಹೌದು, ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿದ್ದಕ್ಕಾಗಿ ಲಜ್ಜೆಪಡು, ನಾಚಿಕೆಪಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು