Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:49 - ಕನ್ನಡ ಸತ್ಯವೇದವು C.L. Bible (BSI)

49 ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ದೇವರು ಹೇಳಿದ್ದೇನೆಂದರೆ, “ನಿನ್ನ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನ್ನಲು ಬೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಬಡವರಿಗೆ ಸಹಾಯ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 “ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:49
43 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು; ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ಯೆಹೂದ ಜನತೆ ಪೇಳ್ವರವರಿಗೆ : “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ".


ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?


ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಗರ್ವಿಷ್ಠನು ಯಾರೇ ಆಗಿರಲಿ, ಅವನು ಸರ್ವೇಶ್ವರನಿಗೆ ಅಸಹ್ಯ; ಅವನಿಗೆ ದಂಡನೆ ತಪ್ಪದು, ಇದು ಖಂಡಿತ.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಅವರಾದರೋ, “ಬಿಡು ದಾರಿ, ಪ್ರವಾಸಿಯಾಗಿ ಬಂದ ಇವನು ನಮಗೆ ನ್ಯಾಯಹೇಳುವವನಾಗಿಬಿಟ್ಟ! ದಾರಿ ಬಿಡದಿದ್ದರೆ ಆ ಮನುಷ್ಯರಿಗಿಂತ ನಿನಗೇ ಹೆಚ್ಚು ಕೇಡಾದೀತು,” ಎಂದು ಹೇಳಿ ಲೋಟನ ಮೇಲೆ ಬಿದ್ದು ತುಳಿದು ಬಾಗಿಲನ್ನು ಒಡೆದುಹಾಕುವುದರಲ್ಲಿದ್ದರು.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;


ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು.


ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ. ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ. ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ. ಅದು ಎಂದೂ ಸೆರೆಹೋಗಲಿಲ್ಲ. ಆದಕಾರಣ ಅದರ ರುಚಿ ಅದರಲ್ಲಿದೆ. ಅದರ ವಾಸನೆ ಮಾರ್ಪಡಲಿಲ್ಲ.


“ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.


ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡುಕರು ನಾಡಾಡಿಗರೊಂದಿಗೆ ಸೇರಿ ಅಸ್ಸೀರಿಯರಿಬ್ಬರ ಕೈಗೆ ಕಡಗವನ್ನು ತೊಡಿಸಿ, ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.


ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು