Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:50 - ಕನ್ನಡ ಸತ್ಯವೇದವು C.L. Bible (BSI)

50 ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡಿಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಸೊದೋಮಿಗೂ ಮತ್ತು ಆಕೆಯ ಹೆಣ್ಣು ಮಕ್ಕಳಿಗೂ ಅತಿರೇಕ ಜಂಬವು ಬಂದು ಭಯಂಕರ ಕೃತ್ಯಗಳನ್ನು ನನ್ನ ಮುಂದೆಯೇ ಮಾಡಿದರು. ಆದ್ದರಿಂದ ನಾನು ಅವರನ್ನು ನನ್ನಿಂದ ದೂರ ಮಾಡಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯವಾದವುಗಳನ್ನು ನಡೆಸಿದರು. ಆದ್ದರಿಂದ ನಾನು ಅದನ್ನು ನೋಡಿ, ಅವರನ್ನು ನಿರ್ಮೂಲ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:50
23 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


ಅಲ್ಲದೆ ಲೋಟನಿಗೆ, "ಈ ರಾತ್ರಿ ತಂಗಲು ನಿನ್ನ ಬಳಿಗೆ ಬಂದ ಆ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ಸಂಭೋಗಿಸಬೇಕು,” ಎಂದು ಕೂಗಿ ಹೇಳಿದರು.


ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು.


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.


ಕೆಡುವಲಾದ ಸೊದೋಮ್, ಗೋಮೊರ ನಗರಗಳಲ್ಲೂ ಸುತ್ತಣ ಊರುಗಳಲ್ಲೂ ಆದಂತೆಯೇ ಎದೋಮಿನಲ್ಲೂ ಆಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲಸದು.


ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ !


ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಅನ್ಯಜನರು ವಾಸಮಾಡುವರು ಅವನ ಗುಡಾರದೊಳಗೆ ಗಂಧಕವನ್ನು ಸುರಿಸಲಾಗುವುದು ಅವನ ಮನೆಯ ಮೇಲೆ.


ಸರ್ವೇಶ್ವರನ ಆಲಯದ ಪ್ರಾಕಾರದೊಳಗಿದ್ದ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗಾಗಿ ಬಟ್ಟೆಬರೆಗಳನ್ನು ನೇಯುತ್ತಿದ್ದರು.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


“ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.


ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಹೇಸಿಗೆಯಾದುದು.


ಆ ಪಟ್ಟಣಗಳನ್ನು, ಇಡೀ ಆ ಬಯಲುಸೀಮೆಯನ್ನೂ ಅವುಗಳ ನಿವಾಸಿಗಳನ್ನೂ ಹೊಲಗಳ ಬೆಳೆಯೆಲ್ಲವನ್ನೂ ಹಾಳುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು