Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:53 - ಕನ್ನಡ ಸತ್ಯವೇದವು C.L. Bible (BSI)

53 “ಸೊದೋಮ್ ಮತ್ತು ಆಕೆಯ ಕುವರಿಯರ ಹಾಗೂ ಸಮಾರಿಯ ಮತ್ತು ಆಕೆಯ ಕುವರಿಯರ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 “ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಸೊದೋಮ್, ಆಕೆಯ ಕುಮಾರ್ತೆಯರು, ಸಮಾರ್ಯ, ಆಕೆಯ ಕುಮಾರ್ತೆಯರು, ಇವರ ದುರವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರವಸ್ಥೆಯನ್ನೂ ತಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನ್ನು ನಾನು ನಾಶಮಾಡಿದೆನು. ನಾನು ಸಮಾರ್ಯವನ್ನು ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆ. ಆದರೆ ನಾನು ತಿರುಗಿ ಆ ಪಟ್ಟಣಗಳನ್ನು ಕಟ್ಟುವೆನು. ಜೆರುಸಲೇಮೇ, ನಾನು ನಿನ್ನನ್ನೂ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 “ ‘ಸೊದೋಮ್ ಮತ್ತು ಆಕೆಯ ಕುಮಾರಿಯರ ಹಾಗೂ ಸಮಾರ್ಯ ಮತ್ತು ಆಕೆಯ ಕುಮಾರಿಯ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:53
21 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ಈಜಿಪ್ಟಿನ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮಭೂಮಿಯಾದ ದಕ್ಷಿಣ ಈಜಿಪ್ಟಿಗೆ ಪುನಃ ಬರಮಾಡುವೆನು. ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.


ನನ್ನ ಜನರಿಗೆ ಬಾಳ್‍ದೇವತೆಯ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ಮೊದಲು ಕಲಿಸಿಕೊಟ್ಟವರು ಇವರೇ. ಈಗ ನನ್ನ ಜನರ ಮಾರ್ಗವನ್ನು ಅವಲಂಬಿಸಿ ನನ್ನ ಹೆಸರೆತ್ತಿ, “ಸರ್ವೇಶ್ವರನ ಜೀವದಾಣೆ” ಎಂದು ಪ್ರಮಾಣ ಮಾಡುವುದನ್ನು ಕಲಿತರೆ ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.


ಇದು ಸರ್ವೇಶ್ವರನಾದ ನನ್ನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.


ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ !


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II


ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.


ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪರವಾಗಿ ನಿಂತದ್ದರಿಂದ ನೀನು ನಾಚಿಕೆಪಡಬೇಕು; ಅವರಿಗಿಂತ ಅಧಿಕವಾಗಿ ನೀನು ಅಸಹ್ಯ ಪಾಪಗಳನ್ನು ಮಾಡಿರುವುದರಿಂದ ಅವರು ನಿನಗಿಂತ ಉತ್ತಮರಾಗಿದ್ದಾರೆ. ಹೌದು, ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿದ್ದಕ್ಕಾಗಿ ಲಜ್ಜೆಪಡು, ನಾಚಿಕೆಪಡು.


ಹೀಗಿರಲು, ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವೆ, ನಾಚಿಕೆಪಡುವೆ.


ಬಯಲು ಭೂಮಿಯಲ್ಲಿನ ಅವರ ಕುವರಿಯರು ಖಡ್ಗದಿಂದ ಹತರಾಗುವರು; ನಾನೇ ಸರ್ವೇಶ್ವರ ಎಂದು ಎಲ್ಲರಿಗೂ ಗೊತ್ತಾಗುವುದು.”


“ನನ್ನ ದಾಸ ಯಕೋಬೇ, ಭಯಪಡಬೇಡ ಇಸ್ರಯೇಲೇ, ಅಂಜಬೇಡ, ಇಗೋ, ನಾನು ನಿನ್ನನ್ನು ಉದ್ಧರಿಸುವೆನು ದೂರದೇಶದಿಂದ ನಿನ್ನ ಸಂತಾನವನ್ನು ರಕ್ಷಿಸುವೆನು ಸೆರೆಹೋದ ಸೀಮೆಯಿಂದ. ಯಕೋಬು ಹಾಯಾಗಿ ಹಿಂತಿರುಗಿ ಬಾಳುವುದು ನೆಮ್ಮದಿಯಿಂದ. ಭಯಪಡಬೇಡ ನನ್ನ ದಾಸ ಯಕೋಬೇ, ನಾನಿದ್ದೇನೆ ನಿನ್ನೊಂದಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು