Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:54 - ಕನ್ನಡ ಸತ್ಯವೇದವು C.L. Bible (BSI)

54 ಹೀಗಿರಲು, ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವೆ, ನಾಚಿಕೆಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಆಗ, ನೀನು ಮಾಡಿದ ಭಯಂಕರ ಕೃತ್ಯಗಳನ್ನು ನಿನ್ನ ನೆನಪಿಗೆ ತಂದುಕೊಳ್ಳುವೆ. ಆಗ ನೀನು ನಾಚಿಕೆಪಡುವೆ. ಅದೇ ಸಮಯದಲ್ಲಿ ನೀನು ನಿನ್ನ ಸಹೋದರಿಯರನ್ನು ಸಂತೈಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಏಕೆಂದರೆ ನೀನು ನಿನ್ನ ನಿಂದೆಯನ್ನು ಹೊತ್ತುಕೊಂಡು, ಅವರನ್ನು ಆಧರಿಸುವಾಗ ಲಜ್ಜೆಪಡುವೆ, ನಾಚಿಕೆಗೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:54
9 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ : “ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುತ್ತಾನೋ ಹಾಗೆಯೆ, ಎಲೈ ಇಸ್ರಯೇಲ್ ಜನರೇ, ನೀವು ನಾಚಿಕೆಪಡುವಿರಿ. ಮರಕ್ಕೆ, ‘ನೀನು, ನನ್ನ ತಂದೆ’ ಎಂತಲೂ ಕಲ್ಲಿಗೆ, ‘ನೀನು ಹೆತ್ತ ತಾಯಿ’ ಎಂತಲೂ ಹೇಳುತ್ತೀರಿ. ನಿಮ್ಮ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಎಲ್ಲರು ಮಾನಭಂಗಕ್ಕೆ ಈಡಾಗುವರು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪರವಾಗಿ ನಿಂತದ್ದರಿಂದ ನೀನು ನಾಚಿಕೆಪಡಬೇಕು; ಅವರಿಗಿಂತ ಅಧಿಕವಾಗಿ ನೀನು ಅಸಹ್ಯ ಪಾಪಗಳನ್ನು ಮಾಡಿರುವುದರಿಂದ ಅವರು ನಿನಗಿಂತ ಉತ್ತಮರಾಗಿದ್ದಾರೆ. ಹೌದು, ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿದ್ದಕ್ಕಾಗಿ ಲಜ್ಜೆಪಡು, ನಾಚಿಕೆಪಡು.


“ಸೊದೋಮ್ ಮತ್ತು ಆಕೆಯ ಕುವರಿಯರ ಹಾಗೂ ಸಮಾರಿಯ ಮತ್ತು ಆಕೆಯ ಕುವರಿಯರ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.


ಆಗ ಸಮಾರಿಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರನ್ನೂ ಅವರ ಕುವರಿಯರನ್ನೂ ನಿನ್ನನ್ನೂ ನಿಮ್ಮ ಪೂರ್ವಸ್ಥಿತಿಗೆ ತರುವೆ.


“ಏಲಾಮೂ ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿವೆ.ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರವಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ಹೀಗಿರಲು ಸರ್ವೇಶ್ವರ ಸ್ವಾಮಿಯಾದ ನಾನು ಹೇಳುವುದಿದು: ‘ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಗೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು