ಯೆಹೆಜ್ಕೇಲನು 16:59 - ಕನ್ನಡ ಸತ್ಯವೇದವು C.L. Bible (BSI)59 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದಿ, ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ಈ ಮಾತುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. “ನೀನು ಮಾಡಿರುವದನ್ನು ನಾನೂ ನಿನಗೆ ಮಾಡುವೆನು. ನೀನು ನಿನ್ನ ಮದುವೆ ಒಡಂಬಡಿಕೆಯನ್ನು ಮುರಿದುಬಿಟ್ಟೆ. ನಮ್ಮ ಒಡಂಬಡಿಕೆಗೆ ನೀನು ಮಹತ್ವ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ. ನೀನು ಒಡಂಬಡಿಕೆಯನ್ನು ಮೀರಿ, ನನ್ನ ಆಣೆಯನ್ನು ತಿರಸ್ಕರಿಸಿರುವೆ. ಅಧ್ಯಾಯವನ್ನು ನೋಡಿ |
“ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರಲ್ಲಿ ಯಾರು ಯಾರು ವಿಗ್ರಹಗಳನ್ನು ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೋ, ಪಾಪಕಾರಿಯಾದ ಆ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೋ ಅಂಥವರು ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬಂದರೆ ಅವರು ಪಾತಕಕ್ಕೆ ಅಂದರೆ, ಅವರ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಸರ್ವೇಶ್ವರನಾದ ನಾನೇ ಅವರಿಗೆ ಉತ್ತರಕೊಡುವೆನು.