ಯೆಹೆಜ್ಕೇಲನು 16:60 - ಕನ್ನಡ ಸತ್ಯವೇದವು C.L. Bible (BSI)60 ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)60 ಹೀಗಾದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಸಂಗಡ ಎಂದಿಗೂ ತಪ್ಪದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್60 ಆದರೆ ನೀನು ಎಳೆಯವಳಾಗಿದ್ದಾಗ ನಿನ್ನೊಡನೆ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ. ನಾನು ಅದನ್ನು ಶಾಶ್ವತವಾದ ಒಡಂಬಡಿಕೆಯನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು. ಅಧ್ಯಾಯವನ್ನು ನೋಡಿ |