ಯೆಹೆಜ್ಕೇಲನು 16:7 - ಕನ್ನಡ ಸತ್ಯವೇದವು C.L. Bible (BSI)7 ಭೂಮಿಯಲ್ಲಿ ಮೊಳಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಿದೆ; ನೀನು ಬಲಿತು ಪ್ರಾಯ ತುಂಬಿ ಅತಿ ಸುಂದರಿಯಾದೆ; ನಿನಗೆ ಸ್ತನಗಳು ಮೂಡಿದವು. ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ‘ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಭೂವಿುಯಲ್ಲಿ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಬಂತು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು, ಹೊಲದಲ್ಲಿ ಸಸಿಯು ಹೇಗೆ ಬೆಳೆಯುತ್ತದೋ ಹಾಗೆಯೇ ನೀನು ಬೆಳೆಯಲು ಸಹಾಯ ಮಾಡಿದೆನು. ನೀನು ಬೆಳೆಯುತ್ತಾ ಯೌವನದ ಹೊಸ್ತಿಲಲ್ಲಿ ಕಾಲಿಟ್ಟ ಹೆಂಗಸಿನಂತಾದೆ. ನಿನಗೆ ಮುಟ್ಟು ಪ್ರಾರಂಭವಾಯಿತು. ನಿನ್ನ ಸ್ತನಗಳು ಬೆಳೆದವು. ಕೂದಲುಗಳು ಬೆಳೆದವು. ಆದರೂ ನೀನು ಬಟ್ಟೆಯಿಲ್ಲದವಳಾಗಿ ಬೆತ್ತಲೆಯಾಗಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹೊಲದಲ್ಲಿಯ ಮೊಳಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು, ನೀನು ಬಲಿತು, ಪ್ರಾಯವು ತುಂಬಿ, ನೀನು ಅತಿ ಸುಂದರಿಯಾದೆ, ನಿನ್ನ ಸ್ತನಗಳು ರೂಪಗೊಂಡವು, ನಿನ್ನ ಕೂದಲು ಬೆಳೆಯಿತು, ಮೊದಲು ನೀನು ಬರೀ ಬೆತ್ತಲೆಯಾಗಿದ್ದೆ. ಅಧ್ಯಾಯವನ್ನು ನೋಡಿ |