Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:8 - ಕನ್ನಡ ಸತ್ಯವೇದವು C.L. Bible (BSI)

8 “ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:8
25 ತಿಳಿವುಗಳ ಹೋಲಿಕೆ  

ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ನೀನೆನ್ನ ದೃಷ್ಟಿಗೆ ಅಮೂಲ್ಯನು, ಘನವಂತನು, ಅತಿಪ್ರಿಯನು. ಎಂದೇ ನಿನ್ನ ಪ್ರಾಣರಕ್ಷಣೆಗಾಗಿ ತ್ಯಜಿಸುವೆನು ಜನರನ್ನೂ ಜನಾಂಗಗಳನ್ನೂ.


ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.


ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


“ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿದೆ; ಹೌದು, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆ.


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


“ನಿಮ್ಮ ಮೇಲೆ ನನಗೆ ಪ್ರೀತಿ ಇದೆ” ಎನ್ನುತ್ತಾರೆ ಸರ್ವೇಶ್ವರ. ನೀವಾದರೋ, “ಯಾವ ವಿಷಯದಲ್ಲಿ ನಮಗೆ ಪ್ರೀತಿ ತೋರಿಸಿದ್ದೀರಿ?” ಎಂದು ಕೇಳುತ್ತೀರಿ. ಅದಕ್ಕೆ ಅವರು, “ಏಸಾವನು ಯಕೋಬನ ಅಣ್ಣನಲ್ಲವೇ? ಆದರೂ ನಾನು ಯಕೋಬನನ್ನು ಪ್ರೀತಿಸಿದೆ;


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


“ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;


ಅವಳು ತನ್ನ ನಲ್ಲರನ್ನು ಹಿಂದಟ್ಟಿ ಹೋದರೂ ಅವರನ್ನು ಸಂಧಿಸಲಾರಳು; ಅವರನ್ನು ಹುಡುಕಿದರೂ ಕಂಡುಹಿಡಿಯಲಾರಳು. ಆಗ ಅವಳು: ‘ನನ್ನನ್ನು ಮದುವೆಯಾದ ಪತಿಯ ಬಳಿಗೆ ಹಿಂತಿರುಗುವೆನು. ಈಗಿನ ಸ್ಥಿತಿಗಿಂತ ಆಗಿನ ಸ್ಥಿತಿಯೇ ಉತ್ತಮವಾಗಿತ್ತು’ ಎಂದುಕೊಳ್ಳುವಳು.


ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು